ಮಂಗಳೂರು: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ | ಅಂದಾಜು ಮುಕ್ಕಾಲು ಕೆಜಿ ಚಿನ್ನ ವಶ

ಮಂಗಳೂರು: ಇಂದು ವಿದೇಶದಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

Ad Widget ... ..

ಅಧಿಕಾರಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದರು. ಕೇರಳ ಮೂಲದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತರು. ಅವರಿಬ್ಬರು ಜೊತೆಗಿದ್ದ ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟು ಸಾಗಿಸುತ್ತಿದ್ದರು. ದುಬೈನಿಂದ ತರಲಾಗುತ್ತಿದ್ದ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Leave a Comment

Your email address will not be published. Required fields are marked *