ನೆಲ್ಯಾಡಿ: ಅಪರಿಚಿತ ವಾಹನ ಡಿಕ್ಕಿ | ಬೈಕ್ ಸವಾರ ಸಾವು ಸಹಸವಾರ ಗಂಭೀರ

ಬೆಳ್ತಂಗಡಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಓರ್ವ ಬೈಕ್ ಸವಾರ ಮೃತಪಟ್ಟು ಸಹಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ.

Ad Widget ... ..

ಗುಂಡ್ಯದಿಂದ ನೆಲ್ಯಾಡಿ ಕಡೆ ತೆರಳುತ್ತಿದ್ದ ಬೈಕ್ ಗೆ ನೆಲ್ಯಾಡಿ ಕಡೆಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡ ಸಹಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೇಯಾಗಬೇಕಿದೆ. ಗಾಯಗೊಂಡವರನ್ನು ಸಕಲೇಶಪುರದ ಮೋಹನ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು, ಪೊಲೀಸರು ಅಪರಿಚಿತ ವಾಹನ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ.

Ad Widget

Leave a Comment

Your email address will not be published. Required fields are marked *