ಕಂಬಳದ ಉಸೇನ್ ಬೋಲ್ಟ್ ಗೆ ಪ್ರಾಣ ಬೆದರಿಕೆ, ‘ಬೆನ್ನಿಗೆ ಹಾಳೆ ಕಟ್ಟಿಕೊಂಡು‌ ಬಾ’ ಎಂದವರಾರು?

ಮಂಗಳೂರು: ಕಂಬಳದ ಗದ್ದೆಯಲ್ಲಿ ಅತಿವೇಗವಾಗಿ ಓಡಿ ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ಧ ಪಡೆದ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರಿಗೆ ವ್ಯಕ್ತಿಯೊಬ್ಬರು ಮೊಬೈಲ್‌ ಫೋನ್ ಕರೆ ಮಾಡಿ, ಬೆದರಿಕೆ ಹಾಕಿ ನಿಂದಿಸಿದ್ದು, ಇದರ ಧ್ವನಿಮುದ್ರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Ad Widget ... ..

ಬೆದರಿಕೆ ಒಡ್ಡಿದ ವ್ಯಕ್ತಿ ಕರೆ ಮಾಡಿ, ‘ನಾನು ಪ್ರಶಾಂತ್ ಬಂಗೇರ, ಶ್ರೀರಾಮ ಸೇನೆಯಲ್ಲಿದ್ದೇನೆ ಎಂದು ಪರಿಚಯಿಸಿಕೊಂಡು ಮಂಗಳೂರು ಕಾರ್ ಸ್ಟ್ರೀಟ್‌ನಲ್ಲಿ ರಿಯಲ್ ಎಸ್ಟೇಟ್ ಕಚೇರಿ ಇದೆ ಅಲ್ಲಿಗೆ ಬನ್ನಿ ಕಂಬಳದ ಇತಿಹಾಸ ತಿಳಿಸುತ್ತೇನೆ’ ಎಂದು ಆಹ್ವಾನಿಸಿದ್ದಾರೆ. ‘ನಾನು ಬರುವುದಿಲ್ಲ, ನೀವು ಒಂಟಿಕಟ್ಟೆಗೆ ಬನ್ನಿ’ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ. ‘ನಾನು ಬರುತ್ತೇನೆ. ಆದರೆ. ನೀನು ಅಲ್ಲಿಗೆ ಬರುವಾಗ ಬೆನ್ನಿಗೆ ಹಾಳೆ ಕಟ್ಟಿಕೊಂಡು ಬಾ.
ಜತೆಯಲ್ಲಿ ನಿನ್ನ ಬೆಂಬಲಿಗರನ್ನು ಕರೆದುಕೊಂಡು ಬಾ’ ಎಂದು ಪ್ರಶಾಂತ್ ಬೆದರಿಸಿದ್ದಾನೆ. ಈ ಮೊಬೈಲ್ ಫೋನ್ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Ad Widget

ಆರೋಪಿ ವಿರುದ್ಧ ಶ್ರೀನಿವಾಸ ಗೌಡ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಶುಕ್ರವಾರ ಸಂಜೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *