ಇಂದಿನಿಂದ ಇಂಡೋ-ಶ್ರೀಲಂಕಾ ಏಕದಿನ ಸರಣಿ, ಗೆಲುವಿನ ‘ಶಿಖರ’ ಏರಲು ಸಜ್ಜು

ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯು ಇಂದಿನಿಂದ ಆರಂಭವಾಗಲಿದೆ. ಎಲ್ಲ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.

Ad Widget ... ..

ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಮುಂಬರುವ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತೀಯ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಈ ಸರಣಿಯು ಉತ್ತಮ ವೇದಿಕೆಯಾಗಲಿದೆ.

Ad Widget

ಇದುವರೆಗೂ 159 ಏಕದಿನ ಪಂದ್ಯಗಳಲ್ಲಿ ಎರಡೂ ತಂಡಗಳು ಮುಖಾಮುಖಿ ಆಗಲಿದ್ದು, ಭಾರತ 91 ಹಾಗೂ ಶ್ರೀಲಂಕಾ 56 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಒಂದು ಪಂದ್ಯ ಟೈ ಆಗಿದ್ದರೆ, 11 ಪಂದ್ಯಗಳಲ್ಲಿ ಫಲಿತಾಂಶ ಲಭ್ಯವಾಗಿಲ್ಲ. ಉಳಿದಂತೆ ಶಿಖರ್ ಧವನ್ ನೇತೃತ್ವದ ತಂಡ ಶ್ರೀಲಂಕಾ ವಿರುದ್ಧ ತಲಾ 3 ಏಕದಿನ ಹಾಗೂ 3 ಟಿ-20 ಪಂದ್ಯಗಳ ಸರಣಿಯಲ್ಲಿ ಆಡಲಿದೆ.

Leave a Comment

Your email address will not be published. Required fields are marked *