Ad Widget .

ಸುಳ್ಯ: ಪಯಸ್ವಿನಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಪಂಜಿಕಲ್ಲು ತೂಗುಸೇತುವೆ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸ್ಥಳೀಯ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ನಾಗರಿಕರು ಶವವನ್ನು ಮೇಲಕ್ಕೆತ್ತಿದ್ದಾರೆ.

Ad Widget . Ad Widget .

ಇಂದು ತೂಗುಸೇತುವೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ನೀರಿನ ಮೇಲೆ ಪೊದೆಯಲ್ಲಿ ಶವವೊಂದು ಸಿಕ್ಕಿಹಾಕಿಕೊಂಡಿರುವುದು ಕಂಡುಬಂದಿದೆ. ಶವ ಕಂಡವರು ತಕ್ಷಣ ಸ್ಥಳೀಯ ಜನರಿಗೆ ಮಾಹಿತಿ ನೀಡಿದ್ದಾರೆ. ನಂತರ ಶವವನ್ನು ಮೇಲಕ್ಕೆತ್ತಲಾಗಿದೆ. ಅಪರಿಚಿತ ಗಂಡಸಿನ ಶವ ಇದಾಗಿದ್ದು ಸದ್ಯ ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *