ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಬುಧವಾರ ಕರಾವಳಿಯಲ್ಲಿ ಆಚರಿಸಲಾಗುತ್ತದೆ.
ಸರಕಾರದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲ ಮಸೀದಿ ಗಳಲ್ಲಿ ಹಬ್ಬ ಆಚರಿಸಲು ಸಿದ್ಧತೆ ನಡಸಲಾಗಿದೆ. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್, ಈದ್ ಖುತಾº ನೆರವೇರಲಿದೆ.
ಮಾಸ್ಕ್ ಧಾರಣೆ ಕಡ್ಡಾಯ, 65 ವರ್ಷ ಪ್ರಾಯ ಮೇಲ್ಪಟ್ಟವರು ಮತ್ತು 10 ವರ್ಷ ಕ್ಕಿಂತ ಕೆಳಗಿನವರು ಮಸೀದಿಗೆ ತೆರಳಬಾರದು. ನಮಾಝ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರವಿರಬೇಕು. ಮಸೀದಿಗೆ ಪ್ರವೇಶಿ ಸುವ ಮುನ್ನ ದೇಹದ ಉಷ್ಣಾಂಶ ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಝರ್‌ನಿಂದ ಶುಚಿಗೊಳಿಸಬೇಕು ಸೇರಿದಂತೆ ಹಲವು ನಿಯಮಾವಳಿ ಪಾಲಿಸು ವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.