Ad Widget .

ದೇಶದಲ್ಲಿ ‌ಹಕ್ಕಿಜ್ವರ ಭೀತಿ| ದೆಹಲಿಯಲ್ಲಿ ಬಾಲಕ ಬಲಿ…!

ನವದೆಹಲಿ: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದ್ದು, ದೆಹಲಿಯ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್​ ಮೆಡಿಕಲ್ ಸೈನ್ಸ್​ (AIIMS)ನಲ್ಲಿ ಹಕ್ಕಿಜ್ವರ (Bird Flu)ದಿಂದ 12ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹಕ್ಕಿ ಜ್ವರದಿಂದ ಸತ್ತ ಮೊದಲ ಪ್ರಕರಣ ಇದಾಗಿದ್ದು, ಆತಂಕ ಮೂಡಿಸಿದೆ. ಏಮ್ಸ್​ನ ಮಕ್ಕಳ ವಿಭಾಗದಲ್ಲಿ ಅಡ್ಮಿಟ್ ಆಗಿದ್ದ ಬಾಲಕನಿಗೆ ಕಳೆದ ಕೆಲವು ದಿನಗಳಿಂದಲೂ H5N1 (ಹಕ್ಕಿಜ್ವರ)ಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆ.

Ad Widget . Ad Widget . Ad Widget .

ಇನ್ನು ಹಕ್ಕಿ ಜ್ವರ ಸಾಂಕ್ರಾಮಿಕ ಆಗಿರುವ ಕಾರಣಕ್ಕೆ ಬಾಲಕನ ಸಂಪರ್ಕಕ್ಕೆ ಬಂದ ದೆಹಲಿ ಏಮ್ಸ್​​ನ ಎಲ್ಲ ಸಿಬ್ಬಂದಿಯೂ ಐಸೋಲೇಟ್​ಗೆ ಒಳಗಾಗಿದ್ದಾರೆ. ಈ ಬಗ್ಗೆ ಎಎನ್​ಐ ಜತೆ ಮಾತನಾಡಿದ ಏಮ್ಸ್​ ವೈದ್ಯರೊಬ್ಬರು, ಈ ಬಾಲಕನಿಗೆ ಲ್ಯುಕೋಮಿಯಾ ಮತ್ತು ನ್ಯುಮೋನಿಯಾ ಕೂಡ ಇತ್ತು. ಆತನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದೂ ತಿಳಿಸಿದ್ದಾರೆ.

Leave a Comment

Your email address will not be published. Required fields are marked *