ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಪದತ್ಯಾಗ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬೆನ್ನಲ್ಲೇ ಬಿಎಸ್‍ವೈ ಭಾವುಕದ ಮಾತುಗಳನ್ನು ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ನನ್ನವರೇ ನನಗೆ ಶತ್ರುವಾದರು ಎಂದು ಬಿಎಸ್‍ವೈ ಅವರು ತಮ್ಮ ಆಪ್ತರ ಬಳಿ ಭಾವುಕರಾಗಿದ್ದಾರೆ. ತಾವೇ ಕರೆತಂದ ಮೂವರಿಂದ ಬಿಎಸ್‍ವೈ ಕುರ್ಚಿಗೆ ಕಂಟಕವಾಗಿದೆಯಂತೆ. ತನ್ನ ಬೆನ್ನಿಗೆ ನಿಲ್ತಾರೆ ಅಂದುಕೊಂಡಿದ್ದವರಿಂದಲೇ ಸಿಎಂಗೆ ಸಂಕಷ್ಟ ಎದುರಾಗಿದೆ.
ಸಿ. ಪಿ ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್, ಸಿ. ಪಿ ಯೋಗೇಶ್ವರ್, ಹೆಚ್. ವಿಶ್ವನಾಥ್ ಹೀಗೆ ಮೂವರು ವ್ಯಕ್ತಿಗಳು ನನಗೆ ಶತ್ರುಗಳಾಗಿದ್ದರೆ ಎಂದು ವಿರೋಧ ವ್ಯಕ್ತಪಡಿಸಿ ಮಾಹಿತಿ ಮಾದ್ಯಮಕ್ಕೆ ಲಭ್ಯವಾಗಿದೆ.







