ಭೂಕುಸಿತ- ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್

ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಾಲ್‌ ಬಳಿ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್‌ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

Ad Widget ... ..

ಮಂಗಳೂರಿಗೆ ತೆರಳುವವರು ಬೇಲೂರು ಮೂಲಕ ಚಾರ್ಮಾಡಿ ಘಾಟ್‌ನಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು. ಮೂಡಿಗೆರೆ, ಹಾನುಬಾಳು, ಕೊಟ್ಟಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Ad Widget

ಧರ್ಮಸ್ಥಳ, ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೆಳಿಗ್ಗೆ ಭೂಕುಸಿತವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಸಂಚಾರ ಬಂದ್‌ ಮಾಡಲಾಗಿದೆ.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತೀಕ್‌, ತಹಶೀಲ್ದಾರ್‌ ಜಯಕುಮಾರ್‌, ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Comment

Your email address will not be published. Required fields are marked *