ಮಹಾರಾಷ್ಟ್ರ: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ. ಸಾವಿರಾರು ಜನ ಮಣ್ಣಿನಡಿ ಮತ್ತು ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ಮಹಾದ್ ತಾಲೂಕಿನ ತಹಿಲೆ ಗ್ರಾಮ ಸಂಪೂರ್ಣ ಪ್ರವಾಹಕ್ಕೆ ಒಳಗಾಗಿದೆ. ಗುರುವಾರ ಮತ್ತು ಶುಕ್ರವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ನೂರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅದಿತಿ ತಟ್ಕರೆ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, NDRF, ನೌಕಾಪಡೆ, ಭೂಸೇನೆ, ಅಗ್ನಿಶಾಮಕ ದಳ, ಪೊಲೀಸರು ಮತ್ತು ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈಗಾಗಲೇ ಸಾವಿರಾರು ಜನರನ್ನು ರಕ್ಷಿಸಲಾಗಿದೆ. ನೂರಾರು ಜನ ಮೃತಪಟ್ಟ ವರದಿಯಾಗಿದೆ. ಈ ಬಗ್ಗೆ ಪ್ರಧಾನಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರು ಎಲ್ಲಾ ಸಹಾಯ ನೀಡುವ ಭರವಸೆ ನೀಡಿದ್ದಾರೆ. ಪ್ರತಿಯೊಬ್ಬ ಪ್ರಜೆಯ ಜೀವ ರಕ್ಷಣೆಯೇ ನಮ್ಮ ಸದ್ಯದ ಉದ್ದೇಶ ಎಂದರು. ಇದಲ್ಲೆದೆ ರಾಜ್ಯದ ರತ್ನಗಿರಿ, ಸತಾರ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಭೂಕುಸಿತದ ವರದಿಯಾಗಿದೆ.