Ad Widget .

ಅತ್ತೆಯ ಕರಿಮಣಿ ಎಗರಿಸಿದ ಅಳಿಯ, ಖತರ್ನಾಕ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Ad Widget . Ad Widget .

ಮಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಹೆಚ್ಚಾಗಿ ಹೊರಗಿನ ವ್ಯಕ್ತಿ ಬಂದು ಕೃತ್ಯ ನಡೆಸಿರುವುದನ್ನು ಕೇಳಿರ್ತೆವೆ. ಆದ್ರೆ ಇಲ್ಲೊಬ್ಬ ಅಳಿಯ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕೋಕೆ ಹೋಗಿ ಅಂದರ್ ಆಗಿದ್ದಾನೆ. ಈ ಕೃತ್ಯವನ್ನು ಸಂಬಂಧಿಕನೇ ಮಾಡಿದ ಎಂದು ಗೊತ್ತಾಗಿ ಮನೆಯವರು ಶಾಕ್‌ಗೆ ಒಳಗಾಗಿದ್ದಾರೆ.

Ad Widget . Ad Widget .

ಮಂಗಳೂರು ಕಮೀಷನರೇಟ್‌ನ ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಪ್ರದೇಶ ಕಳೆದ ತಿಂಗಳ ಹಿಂದೆ ಒಂದು ಘಟನೆ ನಡೆದಿತ್ತು. ಒಂಟಿ ಮಹಿಳೆಯ ಮನೆಗೆ ಇಬ್ಬರು ಕಳ್ಳರು ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ಕರಿಮಣಿ ಸರ ದೋಚಿದ್ದರು. ಸಂತ್ರಸ್ತ ಮಹಿಳೆ ಸುಮತಿ ಆಚಾರ್ಯ ಈ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಹೊರಗಿನವರು ಬಂದು ಕೃತ್ಯ ನಡೆಸಿರೋದು ಅಲ್ಲ, ಯಾರೋ ಪರಿಚಿತರೇ ಕೃತ್ಯ ಎಸಗಿದ್ದಾರೆ ಎಂಬ ಸಂಶಯ ಬಂದಿತ್ತು.

ಈ ಸಂದರ್ಭ ಸ್ಥಳೀಯ ಸಿ.ಸಿ. ಕ್ಯಾಮರಾವೊಂದರಲ್ಲಿ ಕೃತ್ಯ ಎಸಗಿ ಇಬ್ಬರು ಪರಾರಿಯಾಗಿರುವುದು ರೆಕಾರ್ಡ್ ಆಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ಮಹಿಳೆಯ ಅಳಿಯನೇ ಈ ಕಳ್ಳತನ ಕೃತ್ಯ ನಡೆಸಿರುವುದು ಎಂದು ಕಂಡು ಬಂತು. ಸದ್ಯ ಮಹಿಳೆಯ ಅಳಿಯ ವಿನಯ್ ಕುಮಾರ್ ಹಾಗೂ ಕಳ್ಳತನದಲ್ಲಿ ಆತನ ಜೊತೆಗಿದ್ದ ಮಣಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿನಯ್ ಕುಮಾರ್ ಸುರತ್ಕಲ್‌ನ ಕೃಷ್ಣಾಪುರ ಸಮೀಪ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ. ಕೌಟುಂಬಿಕ ಜಗಳ ಇದ್ದ ಹಿನ್ನೆಲೆಯಲ್ಲಿ ಈ ಕೃತ್ಯವನ್ನು ಅಳಿಯ ಎಸಗಿದ್ದಾನೆ ಎಂದು ತನಿಖೆ ಸಂದರ್ಭ ತಿಳಿದು ಬಂದಿದೆ. ಈ ಇಬ್ಬರು ಆರೋಪಿಗಳು ಏಕಾಏಕಿ ಮನೆಯೊಳಗೆ ನುಗ್ಗಿ ಸುಮತಿ ಆಚಾರ್ಯರ ಬಾಯಿಗೆ ಬಟ್ಟೆ ಕಟ್ಟಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಎಳೆದು ಎಸ್ಕೇಪ್ ಆಗಿದ್ದರು.

ಸದ್ಯ ಇಬ್ಬರು ಆರೋಪಿಗಳಿಂದ 60 ಸಾವಿರ ಮೌಲ್ಯದ 32 ಗ್ರಾಂ ತೂಕದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಅಳಿಯ ಈ ಕೃತ್ಯ ಎಸಗುತ್ತಾನೆ ಎಂದು ಕನಸು ಮನಸ್ಸಿನಲ್ಲೂ ಯೋಚಿಸದ ಅತ್ತೆಗೆ ಈ ದರೋಡೆ ಘಟನೆಯಿಂದಾಗಿ ಶಾಕ್ ಆಗಿದೆ. ಮನೆಯಲ್ಲಿ ಎಲ್ಲರೂ ಇರುವ ಸಂದರ್ಭದಲ್ಲಿ ಅತ್ತೆಯೊಂದಿಗೆ ಒಳ್ಳೆಯವನಂತೆ ಫೋಸ್ ಕೊಡುತ್ತಿದ್ದ ಈ ಖತರ್ನಾಕ್ ಅಳಿಯ ಮನೆಯಲ್ಲಿ ಅತ್ತೆಯೊಬ್ಬರೇ ಇರುವುದನ್ನು ಖಾತರಿಪಡಿಸಿಕೊಂಡು ಕೃತ್ಯಕ್ಕೆ ಕೈ ಹಾಕಿದ್ದಾನೆ. ಮಗಳ ಜೊತೆಗೆ ಇದೀಗ ಅತ್ತೆಯ ಕರಿಮಣಿ ಸರವನ್ನೂ ದೋಚಲು ಯತ್ನಿಸಿದ ಕಳ್ಳ ಅಳಿಯನ ವಿರುದ್ಧ ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶವೂ ಕೇಳಿಬರುತ್ತಿದೆ.

ಸದ್ಯ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಒಟ್ಟಿನಲ್ಲಿ ಹೆಣ್ಣು ಕೊಟ್ಟ ಮನೆಗೆ ಕನ್ನ ಹಾಕಲು ಬಂದು ಅಳಿಯ ಈಗ ಅಂದರ್ ಆಗಿದ್ದಾನೆ.

Leave a Comment

Your email address will not be published. Required fields are marked *