Ad Widget .

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ

Ad Widget . Ad Widget .

Ad Widget . Ad Widget .

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವಂತ ಮುಖ್ಯಮಂತ್ರಿ ಸ್ಥಾನಕ್ಕೆ, ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ನೂತನ ಸಿಎಂ ಆಯ್ಕೆ ಕುರಿತಂತೆ ರಾಜ್ಯಕ್ಕೆ ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ , , ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತ್ರತ್ವದಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ನೂತನ ಮುಖ್ಯಮಂತ್ರಿಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಯ್ಕೆಯ ಕುರಿತಂತೆ ಚರ್ಚೆ ನಡೆದಿದ್ದು, ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಶಾಸಕ ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್, ಬಸವರಾಜ ಬೊಮ್ಮಾಯಿ, ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಕ್ಷಣದಲ್ಲಿ ಬಿ.ಎಲ್.ಸಂತೋಷ್, ಸಂಸದ ಪ್ರಹ್ಲಾದ್ ಜೋಷಿ ಹೆಸರು ಕೂಡಾ ಕೇಳಿಬಂದಿತ್ತು. ಅಂತಿಮವಾಗಿ ಕೇಂದ್ರ ವೀಕ್ಷಕರು ಬಸವರಾಜ್ ಬೊಮ್ಮಾಯಿ ಅವರನ್ನು ಸೂಚಿಸಿದ್ದರು.

ನಾಳೆಯೇ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ರವರ ಆಪ್ತರೂ ಹೌದು.

Leave a Comment

Your email address will not be published. Required fields are marked *