Ad Widget .

ಸಚಿವ ಸ್ಥಾನಕ್ಕಾಗಿ ಬಿಎಸ್‍ವೈ ನಿವಾಸದಲ್ಲಿ ಶಾಸಕರು ಠಿಕಾಣಿ

Ad Widget . Ad Widget .

ದಾವಣಗೆರೆ: ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಕಳೆದ ಎರಡು ದಿನಗಳಿಂದ ಸಿಎಂ ಯಡಿಯೂರಪ್ಪನವರ ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ.

Ad Widget . Ad Widget .

ಈ ಕುರಿತು ಮಾತನಾಡಿದ ಶಾಸಕ ಎಸ್.ವಿ.ರಾಮಚಂದ್ರಪ್ಪ, ನಾನು ಮೂರು ಬಾರಿ ಗೆಲುವು ಸಾಧಿಸಿದ್ದು, ಪಕ್ಷಕ್ಕೆ ನನ್ನದೇಯಾದ ಕೊಡುಗೆ ಇದೆ. ಅಲ್ಲದೆ ಸಿಎಂ ಯಡಿಯೂರಪ್ಪನವರಿಗೆ ನನ್ನ ಬಗ್ಗೆ ಒಲವು ಇದೆ. ಹೀಗಾಗಿ ಈ ಬಾರಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದರು.

ಇನ್ನೂ ಜಿಲ್ಲೆಯ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ನಿನ್ನೆಯಿಂದ ಸಿಎಂ ಮನೆಯಲ್ಲಿ ಇದ್ದು. ತಮಗೂ ಕೂಡ ಸಚಿವ ಸ್ಥಾನ ಕೊಡಿಸಬೇಕೆಂದು ಲಾಬಿ ಮಾಡುತ್ತಿದ್ದಾರೆ.

ಬರದ ನಾಡಿಗೆ ಸಚಿವ ಸ್ಥಾನ ಸಿಗಲಿದೆ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗಲೇ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಕೆಲ ಗೊಂದಲಗಳಿಂದ ಸಿಗಲಿಲ್ಲ. ಈ ಸಲ ಅವಕಾಶ ನೀಡುವ ಬಗ್ಗೆ ಬಿಎಸ್‍ವೈ ಭರವಸೆ ನೀಡಿದ್ದಾರೆ. ಮೂರು ಸಲ ಶಾಸಕ ಹಾಗೂ ವಾಲ್ಮೀಕಿ ಸಮಾಜ ದವನಾದ ಹಿನ್ನೆಲೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಅಲ್ಲದೆ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷರಾಗಿ ಯಡಿಯೂರಪ್ಪನವರೇ ಆಯ್ಕೆ ಮಾಡಿದ್ದರು. ಈ ಬಾರಿ ಸಚಿವ ಸ್ಥಾನ ಸಿಗುವ ಎಲ್ಲ ಲಕ್ಷಣಗಳು ಇದೆ. ಸಂಜೆ ಶಾಸಕಾಂಗದ ಸಭೆ ಇದೆ, ಅಲ್ಲಿ ನಿರ್ಧಾರ ವಾಗಲಿದೆ ಎಂದರು

Leave a Comment

Your email address will not be published. Required fields are marked *