ರಾಜಕೀಯ ಮೇಲಾಟದ ನಡುವೆ ರಾಜ್ಯಕ್ಕೆ ಪ್ರವಾಹ ಪರಿಹಾರ ಘೋಷಿಸಿದ ಕೇಂದ್ರ
ನವದೆಹಲಿ: ಒಂದೆಡೆ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಕ್ಷೀಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಭಾರೀ ಮಳೆಯಿಂದ ಹಲವೆಡೆ ಪ್ರವಾಹ ಎದುರಾಗಿದೆ.
ಇದರ ಮಧ್ಯೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 629.03 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.
ಈ ಬಾರಿಯ ಮಳೆಗಾಲದಲ್ಲಿ ಈವರೆಗಿನ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂ ಪರಿಹಾರ ಘೋಷಿಸಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಜತೆಗೆ ಮಹಾರಾಷ್ಟ್ರಕ್ಕೆ 701 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.
ಎಸ್ಡಿಆರ್ಎಫ್ ಮಾನದಂಡಗಳ ಅಡಿಯಲ್ಲಿ ಅತಿವೃಷ್ಟಿ ಪರಿಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ & ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.629.03 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ ರೂ.701.00 ಕೋಟಿಗಳ ನೆರವಿನ ಅನುಮೋದನೆಯನ್ನು SDRF ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ.