Ad Widget .

ಸಚಿವ ಸಂಪುಟದಲ್ಲಿ ನಾನಿಲ್ಲ – ಶೆಟ್ಟರ್ ಅಚ್ಚರಿಯ ಹೇಳಿಕೆ

ಬೆಂಗಳೂರು. ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ನಾನು ಸೇರುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ

Ad Widget . Ad Widget .

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದೊಳಗೆ ಕೆಲಸ ಮಾಡಲು ನಿರ್ಧರಿಸಿದ್ದು, ಯಾವುದೇ ಸಚಿವ ಸ್ಥಾನ ಆಕಾಂಕ್ಷಿಯಲ್ಲ.
ಪಕ್ಷದಲ್ಲಿ ನಾನು ತಳಮಟ್ಟದಲ್ಲಿ ಮೇಲಿನ ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನಾನು ಯಾವುದೇ ಸ್ಥಾನಮಾನ ಅಪೇಕ್ಷಿಸುತ್ತಿಲ್ಲ. ನನ್ನ ಈ ನಿರ್ಧಾರ ವೈಯಕ್ತಿಕವಾಗಿದ್ದು, ಯಾರ ಒತ್ತಡವೂ ಇಲ್ಲ ಎಂದು ಅವರು ಹೇಳಿದರು.

Ad Widget . Ad Widget .

ಇತ್ತೀಚೆಗೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡೀಯೋದಲ್ಲಿ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ವಿವಾದದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

Leave a Comment

Your email address will not be published. Required fields are marked *