Ad Widget .

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ

Ad Widget . Ad Widget .

ಬೆಂಗಳೂರು: ರಾಜ್ಯದ 30 ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಳವು ಯೋಜನೆಗಳನ್ನು ಘೋಷನೆ ಮಾಡಿದ್ದಾರೆ. ಇದು ಮುಖ್ಯ ಮಂತ್ರಿಯಾದ ನಂತರದ ಮೊದಲ ಯೋಜನೆಯಾಗಿದೆ.
ಎಲ್ಲಾ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ನೂತನ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

Ad Widget . Ad Widget .

ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆ.
ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ ಮಾಸಾಶನ 1000 ದಿಂದ 1200 ರೂ.ಗೆ ಹೆಚ್ಚಳ. ಈ ಯೋಜನೆಗೆ 863 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ.
ಅಂಗವಿಕಲರ ವೇತನ 600 ರೂ. ಯಿಂದ 800 ರೂ.ಗೆ ಹೆಚ್ಚಳ. ವಿಧವಾ ವೇತನ 800 ರೂ.ಗೆ ಹೆಚ್ಚಳ. 17.25ಲಕ್ಷ ಫಲಾನುಭವಿಗಳಿಗೆ ಲಾಭ ಸಿಗಲಿದೆ. ಎಂದು ಸಿಎಂ ಘೋಷನೆ ಮಾಡಿದ್ದಾರೆ.

ಬೆಳಗ್ಗೆ 11ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ.

Leave a Comment

Your email address will not be published. Required fields are marked *