ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು

Ad Widget ... ..

ಕುಂದಾಪುರ: ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

Ad Widget

ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(೫೨) ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮ ಕುಲಾಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *