Ad Widget .

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ

Ad Widget . Ad Widget .

Ad Widget . Ad Widget .

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್ ಫೋನ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಅಪ್ರಾಪ್ತ ಬಾಲಕಿಗೆ ಆಟೋ ರಿಕ್ಷಾ ಚಾಲಕ ಕಿರುಕುಳ ನೀಡಿದ ಬಗ್ಗೆ ಪೊಕ್ಸೊ ಪ್ರಕರಣವನ್ನು ಜನವರಿಯಲ್ಲಿ ದಾಖಲಿಸಲಾಗಿತ್ತು. ಆದರೆ ಈ ವೇಳೆ ಬಾಲಕಿಯ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ.

Leave a Comment

Your email address will not be published. Required fields are marked *