Ad Widget .

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಅಡಿಕೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಪರಾರಿಯಾಗಿದ್ದಾರೆ.

Ad Widget . Ad Widget . Ad Widget .

ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮೂಲಕ ಇಷ್ಟು ಮೌಲ್ಯದ ಅಡಿಕೆಗಳನ್ನೂ ರಾಜ್‌ಕೋಟ್‌ ನ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆ ಗೆ ಕಳುಹಿಸಲಾಗಿತ್ತು. ಇದೀಗ ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮಾಲಕ ವಿಜಯ್ ಜೋಷಿ ಹಾಗೂ ಲಾರಿ ಚಾಲಕರಾದ ಬಾವೇಶ್ ಕೆ. ಷಾ, ಆಶೀಶ್ ಯಾದವ್ ವಿರುದ್ದ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎನೀದು ಪ್ರಕರಣ?

ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆಯು ಭಟ್ಕಳ ಸೇರಿದಂತೆ ಇತರೆಡೆ ಅಡಿಕೆ ಹಾಗೂ ಇತರ ಕಾಡುತ್ಪನ್ನಗಳನ್ನು ಖರೀದಿಸಿ ಹೊರರಾಜ್ಯಕ್ಕೆ ಕಳುಹಿಸುವ ವ್ಯವಹಾರ ನಡೆಸುತ್ತಿದೆ .ಈ ಸಂಸ್ಥೆಯೂ ಜು.19ರಂದು ಬೋಳೂರಿನ ಜಯಲಕ್ಷ್ಮೀ ಟ್ರಾನ್ಸ್‌ಪೋರ್ಟ್ ಬುಕಿಂಗ್ ಆಫೀಸ್‌ನಿಂದ ಲಾರಿಯನ್ನು ಗೊತ್ತುಪಡಿಸಿ ಗುಜರಾತಿನ ರಾಜ್‌ಕೋಟ್‌ನಲ್ಲಿರುವ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಬ್ರಾಂಚ್ ಆಫೀಸಿಗೆ 291 ಚೀಲ ಅಡಿಕೆ ತುಂಬಿಸಿ ಕಳುಹಿಸಲಾಗಿತ್ತು.

ನಂತರ ಜು.20ರಂದು ಇನ್ನೊಂದು ಲಾರಿಯಲ್ಲಿ 301 ಚೀಲ ಅಡಕೆಯನ್ನು ಕಳುಹಿಸಿತ್ತು ಈ ಎರಡು ಲಾರಿಗಳು ಜು.24ರಂದು ಗುಜರಾತ್ ರಾಜ್‌ಕೋಟ್ ಸಂಬಂಧಪಟ್ಟ ಬ್ರಾಂಚ್‌ಗೆ ತಲುಪಬೇಕಾಗಿತ್ತು. ಆದರೆ ಅಲ್ಲಿಗೆ ತಲುಪದೆ ಲಾರಿ ಸಹಿತ ಚಾಲಕರು ನಾಪತ್ತೆಯಾಗಿದ್ದಾರೆ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ .

Leave a Comment

Your email address will not be published. Required fields are marked *