Ad Widget .

ಸೌತಡ್ಕ‌ ಗಣಪನ ಸನ್ನಿದಿಯಿಂದ ಮಣ್ಣು ತೆಗೆದುಕೊಂಡು ಹೋದ ಮುಸ್ಲಿಂ ಯುವಕ – ಶಂಕಾಸ್ಪದ ಘಟನೆ ಸಿಸಿ ಟಿವಿಯಲ್ಲಿ ಸೆರೆ- ದೂರು ದಾಖಲು

Ad Widget . Ad Widget .

ಧರ್ಮಸ್ಥಳ: ಹಿಂದೂಗಳ ಪ್ರಸಿದ್ಧ ಯಾತ್ರಾಸ್ಥಳ, ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವಠಾರದಿಂದ ಮುಸ್ಲಿಂ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Ad Widget . Ad Widget .

ಸಿಸಿ ಟಿವಿ ದೃಶ್ಯಾವಳಿಯಿಂದ ಯುವಕನ ಚಹರೆ ಪತ್ತೆಯಾಗಿದ್ದು, ಈತ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಕಲಂದರ್ ಎಂದು ಗುರುತಿಸಲಾಗಿದೆ. ಈತ ಸೌತಡ್ಕ ಕ್ಷೇತ್ರದ ಆವರಣದಿಂದ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲವೊಂದರಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದ್ದು, ಜು.24 ರಂದು ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ದೇವಸ್ಥಾನದಲ್ಲಿ ಜನಸಂದಣಿ ಕಡಿಮೆ ಇರುವ ಸಂದರ್ಭದಲ್ಲಿ ಸಂಶಯಾಸ್ಪದವಾಗಿ ವರ್ತಿಸಿದ್ದು, ಈತ ದೇವಳದ ವಠಾರದಿಂದ ಮಣ್ಣು ಅಗೆದು ಅದನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಹೋಗಿರುವುದು ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಭಕ್ತರಿಗೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದೂರು ನೀಡಿದ್ದು, ವ್ಯಕ್ತಿಯಿಂದ ಶ್ರೀ ಕ್ಷೇತ್ರಕ್ಕೆ ಯಾವುದೇ ಅನಾಹುತ ಸಂಭವಿಸುವ ಸಾಧ್ಯತೆಯಿದೆ.ಅಲ್ಲದೆ ಈತನ ವಿರುದ್ಧ ಹಿಂದೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತಂತೆ ತನಿಖೆ ಮುಂದುವರೆಸಿದ್ದಾರೆ.

Leave a Comment

Your email address will not be published. Required fields are marked *