ಸುಳ್ಯ: ವ್ಯಕ್ತಿಯೊಬ್ಬರು ವಾಹನ ಢಿಕ್ಕಿಯಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ಢಿಕ್ಕಿ ಗಂಭೀರ ಗಾಯವಾಗಿತ್ತು. ತಕ್ಷಣ ಸ್ಥಳೀಯರು ಇವರನ್ನು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಗಂಭೀರ ಗಾಯವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಇವರು ಅಪತಿಚಿತರಾಗಿದ್ದು, 45 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದ್ದು, ವ್ಯಕ್ತಿಯ ಕಿವಿಯಲ್ಲಿ ಟಿಕ್ಕಿ ಇದೆ. ಪರಿಚಯ ಸಿಗದೇ ಇರುವ ಹಿನ್ನೆಲೆಯಲ್ಲಿ ಅವರ ಮನೆಯವರಿಗೆ ವಿಷಯ ತಿಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.