ಚಿಕ್ಕಮಗಳೂರು: ಬೈಕಿನ ಹೆಡ್‌ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸೇರಿ ನಾಲ್ವರ ತಂಡ ಬಜರಂಗದಳದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ.
ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಹಾಗೂ ನಿತಿನ್ ಎಂಬ ಯುವಕರು ಕೊಪ್ಪ ತಾಲೂಕಿನ ಗುಣವಂತೆ ಸಮೀಪ ವಾಷಿಂಗ್ ಮೆಷಿನ್ ರಿಪೇರಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮಕ್ಕಿಮನೆ ಮಾರ್ಗವಾಗಿ ವಾಪಸ್ ಬರುತ್ತಿದ್ದಾಗÀ ಕೊಪ್ಪ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಎದುರಿನಿಂದ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ವಾಹಕ್ಕೆ ಬಜರಂಗದಳದ ಯುವಕರರ ಬೈಕಿನ ಲೈಟ್ ಡಿಮ್‌ಡಿಪ್ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಹರಂದೂರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮೂವರು ಸೇರಿಕೊಂಡು ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ ಗುಣವಂತೆ ರಸ್ತೆಯ ಸರ್ಕಾರಿ ಶಾಲೆಯ ಸರ್ಕಲ್‌ನಲ್ಲಿ ಹರಂದೂರು ಗ್ರಾಮ ಪಂಚಾಯತ್ ಸದಸ್ಯ ಚೇತನ್, ಮಂಜು, ಪವನ್, ಹರೀಶ್ ಎಂಬುವವರು ಬೈಕನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಲ್ಲೆಯಿಂದ ಗಂಭೀರ ಗಾಯವಾಗಿದ್ದ ಬೈಕ್ ಸವಾರ ಪ್ರದೀಪ್ ಎಂಬವರನ್ನು ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದ. ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.