Ad Widget .

ಬಂಟ್ವಾಳ: ರೈಲ್ವೆ ಹಳಿ ಮೇಲೆ ನಿಗೂಢ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ

Ad Widget . Ad Widget .

ಬಂಟ್ವಾಳ: ಇಲ್ಲಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ.

Ad Widget . Ad Widget .

ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಮನೆಯಿಂದ ಹೋರಟ ಕಾರ್ತಿಕ್ ರಾತ್ರಿ 11 ಗಂಟೆಯಾದರು ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಆತನ‌ ಹುಡುಕಾಟ ಆರಂಭಿಸಿದ್ದು, ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ಪೋಲೀಸರ ತನಿಖೆ ಮುಂದುವರಿಸಿದ್ದಾರೆ.
ಸಾವಿನ ಬಗ್ಗೆ ಸಂಶಯವಿರುವ ಹಿನ್ನಲೆ ಆತ್ಮ ಹತ್ಯೆಯೋ ಅಥವಾ ಕೊಲೆಯೋ ಎಂದು ತನಿಖೆ ವೇಳೆ ತಿಳಿದು ಬರಬೇಕಾಗಿದೆ.

Leave a Comment

Your email address will not be published. Required fields are marked *