Ad Widget .

ಬೊಮ್ಮಾಯಿ ಕ್ಯಾಬಿನೆಟ್ ಗುರುವಾರ ಅಸ್ತಿತ್ವಕ್ಕೆ? ಒಂದೇ ಬಾರಿಗೆ ‘ಸಮಗ್ರ’ ಸಚಿವ ಸಂಪುಟ

Ad Widget . Ad Widget .

ಬೆಂಗಳೂರು: ಮಂತ್ರಿಗಿರಿಗಾಗಿ ನಾಯಕರ ಕಸರತ್ತು, ಶಾಸಕರ ಲಾಬಿ, ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ರಚನೆ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

Ad Widget . Ad Widget .

ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬಸವರಾಜ್ ಬೊಮ್ಮಾಯಿ, ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಬೊಮ್ಮಾಯಿ ತೆಗೆದುಕೊಂಡು ಹೋಗಿದ್ದ 21 ಜನರ ಲಿಸ್ಟ್ ನಲ್ಲಿ ಕೇವಲ 6 ಜನರ ಹೆಸರನ್ನು ಮಾತ್ರ ಹೈಕಮಾಂಡ್ ಫೈನಲ್ ಮಾಡಿದ್ದು, ಸೋಮವಾರ ಮತ್ತೊಮ್ಮೆ ದೆಹಲಿಗೆ ಬರುವಂತೆ ಸಿಎಂ ಗೆ ಸೂಚಿಸಿದೆ. ಹಾಗಾಗಿ ಸೋಮವಾರ ಸಿಎಂ ಬೊಮ್ಮಾಯಿ ಮತ್ತೊಮ್ಮೆ ದೆಹಲಿಗೆ ತೆರಳಲಿದ್ದು, ಈ ವೇಳೆ ಉಳಿದ ಸಚಿವರ ಪಟ್ಟಿ ಫೈನಲ್ ಆಗಲಿದೆ ಎನ್ನಲಾಗಿದೆ.
ಒಂದೇ ಹಂತದಲ್ಲಿ ಕ್ಯಾಬಿನೆಟ್ ವಿಸ್ತರಣೆಗೆ ಹೈಕಮಾಂಡ್ ಚಿಂತನೆ ನಡೆಸಿದ್ದು, ನೂತನ ಸಚಿವರು ಗುರುವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *