July 2021

ಕರಾವಳಿಯಲ್ಲಿಂದು ಬಕ್ರೀದ್ ಸಂಭ್ರಮ| ಕೋವಿಡ್ ಮಾರ್ಗಸೂಚಿಯೊಂದಿಗೆ ಸರಳವಾಗಿ ಹಬ್ಬ ಆಚರಿಸುತ್ತಿರುವ ಮುಸ್ಲಿಂ ಬಾಂಧವರು

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಬುಧವಾರ ಕರಾವಳಿಯಲ್ಲಿ ಆಚರಿಸಲಾಗುತ್ತದೆ. ಸರಕಾರದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲ ಮಸೀದಿ ಗಳಲ್ಲಿ ಹಬ್ಬ ಆಚರಿಸಲು ಸಿದ್ಧತೆ ನಡಸಲಾಗಿದೆ. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಝ್, ಈದ್‌ ಖುತಾº ನೆರವೇರಲಿದೆ. ಮಾಸ್ಕ್ ಧಾರಣೆ ಕಡ್ಡಾಯ, 65 ವರ್ಷ ಪ್ರಾಯ ಮೇಲ್ಪಟ್ಟವರು ಮತ್ತು 10 ವರ್ಷ ಕ್ಕಿಂತ ಕೆಳಗಿನವರು ಮಸೀದಿಗೆ ತೆರಳಬಾರದು. ನಮಾಝ್ ನಿರ್ವಹಿಸುವವರ ಮಧ್ಯೆ ಕನಿಷ್ಠ […]

ಕರಾವಳಿಯಲ್ಲಿಂದು ಬಕ್ರೀದ್ ಸಂಭ್ರಮ| ಕೋವಿಡ್ ಮಾರ್ಗಸೂಚಿಯೊಂದಿಗೆ ಸರಳವಾಗಿ ಹಬ್ಬ ಆಚರಿಸುತ್ತಿರುವ ಮುಸ್ಲಿಂ ಬಾಂಧವರು Read More »

ಚಹಾರ್ ಪರಾಕ್ರಮ, ಭಾರತಕ್ಕೆ ಸರಣಿ ಕೈವಶ

ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲೂ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಏಕದಿನ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಉಳಿದಿರುವಂತೆಯೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಮಿಂಚಿದ ದೀಪಕ್ ಚಾಹರ್ (ಅಜೇಯ 69 ರನ್ ಹಾಗೂ 2 ವಿಕೆಟ್) ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಸೂರ್ಯಕುಮಾರ್ ಯಾದವ್ (53), ಮನೀಶ್ ಪಾಂಡೆ (37), ಕೃಣಾಲ್ ಪಾಂಡ್ಯ (35) ಹಾಗೂ ಭುವನೇಶ್ವರ್ ಕುಮಾರ್

ಚಹಾರ್ ಪರಾಕ್ರಮ, ಭಾರತಕ್ಕೆ ಸರಣಿ ಕೈವಶ Read More »

ನಾಯಕತ್ವ ಬದಲಾವಣೆ ಹಿನ್ನೆಲೆ| ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ|

ಬೆಂಗಳೂರು : ನಾಯಕತ್ವ ಬದಲಾವಣೆಯ ವದಂತಿ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಲವು ಶಾಸಕರ ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 30 ಜಿಲ್ಲೆಗಳ 134 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿ 1277 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಪ್ರತನಿಧಿಸುವ ಚನ್ನಪಟ್ಟಣ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಜೊತೆಗೆ ಪ್ರಮುಖವಾಗಿ ತಮ್ಮ ನಾಯಕತ್ವದ ವಿರುದ್ಧ ಆಗಾಗ್ಗೆ ಗುಟುರು ಹಾಕುತ್ತಿರುವ ವಿರೋಧಿಗಳ

ನಾಯಕತ್ವ ಬದಲಾವಣೆ ಹಿನ್ನೆಲೆ| ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ| Read More »

ಸುಳ್ಯ: ಪಯಸ್ವಿನಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಪಂಜಿಕಲ್ಲು ತೂಗುಸೇತುವೆ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸ್ಥಳೀಯ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ನಾಗರಿಕರು ಶವವನ್ನು ಮೇಲಕ್ಕೆತ್ತಿದ್ದಾರೆ. ಇಂದು ತೂಗುಸೇತುವೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ನೀರಿನ ಮೇಲೆ ಪೊದೆಯಲ್ಲಿ ಶವವೊಂದು ಸಿಕ್ಕಿಹಾಕಿಕೊಂಡಿರುವುದು ಕಂಡುಬಂದಿದೆ. ಶವ ಕಂಡವರು ತಕ್ಷಣ ಸ್ಥಳೀಯ ಜನರಿಗೆ ಮಾಹಿತಿ ನೀಡಿದ್ದಾರೆ. ನಂತರ ಶವವನ್ನು ಮೇಲಕ್ಕೆತ್ತಲಾಗಿದೆ. ಅಪರಿಚಿತ ಗಂಡಸಿನ ಶವ ಇದಾಗಿದ್ದು ಸದ್ಯ ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.

ಸುಳ್ಯ: ಪಯಸ್ವಿನಿ ನದಿಯಲ್ಲಿ ಅಪರಿಚಿತ ಶವ ಪತ್ತೆ Read More »

ಅಂಬ್ಯುಲೆನ್ಸ್ ಗೆ ದಾರಿ‌ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು

ಮಂಗಳೂರು, ಜುಲೈ 20: ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ತೊಂದರೆ ನೀಡಿದ್ದ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಹೊರವಲಯದ ಕುಂಪಲ ನಿವಾಸಿ ಚರಣ್‌ನನ್ನು(31) ಮಂಗಳೂರಿನ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 19ರ ಸಂಜೆ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಓಡಿಸಿ ಇರ್ಟಿಗಾ ಕಾರಿನ ಚಾಲಕ ಸತಾಯಿಸಿದ್ದ. ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ನಡೆದಿದ್ದ ಘಟನೆ‌ ನಡೆದಿದ್ದು, ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ

ಅಂಬ್ಯುಲೆನ್ಸ್ ಗೆ ದಾರಿ‌ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು Read More »

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದರೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದು ಈ ಮೂಲಕ ದ.ಕ. ಪ್ರಥಮ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣವೂ ದ್ವಿತೀಯ ಸ್ಥಾನದಲ್ಲಿದ್ದು, 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರಕಿದೆ. ಇನ್ನು ಕೃಷ್ಣ ನಗರಿ ಉಡುಪಿ

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್ Read More »

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು

ನೆಲಮಂಗಲ: ತಾಲೂಕಿನಾದ್ಯಂತ ತಡರಾತ್ರಿವರೆಗೂ ಧಾರಾಕಾರ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಮತ್ತು ಗಂಭೀರ ಗಾಯಗೊಂಡವರನ್ನು ಸಂಪ್ರಥ್ (22) ಎಂದು ಗುರುತಿಸಲಾಗಿದೆ. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಇದ್ದ ಮನೆಯ ಮೇಲೆ ಕುಸಿದಿದೆ. ಅಲ್ಲದೆ ಮನೆಯಲ್ಲಿ ಮಲಗಿದ್ದ ಕಾವ್ಯ ಹಾಗೂ ವೇಣುಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು Read More »

ಕಾಸರಗೋಡು: ಪತಿಯಿಂದ ಪತ್ನಿಯ ಕೊಲೆ

ಕಾಸರಗೋಡು: ಪತಿಯ ಹೊಡೆತದಿಂದ ಪತ್ನಿ ಮೃತಪಟ್ಟ ದಾರುಣ ಘಟನೆ ಬೇಡಡ್ಕದಲ್ಲಿ ಜು.19ರ ಸೋಮವಾರ ರಾತ್ರಿ ನಡೆದಿದೆ. ಬೇಡಡ್ಕ ಕೊರತ್ತಿಕುಂಡು ಕಾಲನಿಯ ಸ್ಮಿತಾ (23) ಮೃತಪಟ್ಟವರು. ಕೊಲೆ ಮಾಡಿದವನನ್ನು ಆಕೆಯ ಪತಿ ಅರುಣ್ ಎಂದು ಗುರುತಿಸಲಾಗಿದೆ. ಈತ ಸೋಮವಾರ ರಾತ್ರಿ ಪತ್ನಿಗೆ ಹೊಡೆದು ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಜೋರಾದ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ಗಾಯಗೊಂಡಿದ್ದ ಸ್ಮಿತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ನನ್ನು ಬೇಡಡ್ಕ ಠಾಣಾ ಪೊಲೀಸರು

ಕಾಸರಗೋಡು: ಪತಿಯಿಂದ ಪತ್ನಿಯ ಕೊಲೆ Read More »

ಪುತ್ತೂರು: ಕಾರಿನಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ | ಆರೋಪಿಯ ಬಂಧನ

ಪುತ್ತೂರು : ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ದಲ್ಲಿ ನಡೆದಿದೆ. ಕೃತ್ಯ ಎಸಗಿದವನನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡದ ರುಕ್ಮಯ್ಯ ಮಡಿವಾಳ (42) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇರದ ಸಂದರ್ಭದಲ್ಲಿ ರುಕ್ಮಯ್ಯ ಮಡಿವಾಳ ಕಾರಿನಲ್ಲಿ ಬಂದು 16 ವರ್ಷದ ಬಾಲಕಿಯನ್ನು ಕಾರಿನಲ್ಲಿ ಬರಬೇಕು ಎಂದು ಬಲವಂತ ಮಾಡಿದ್ದಾನೆ. ಬಾಲಕಿ ಒಪ್ಪದಿದ್ದಾಗ ಕೊನೆಗೆ ಬೆದರಿಸಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಹಿಂಸೆ ನೀಡಲು

ಪುತ್ತೂರು: ಕಾರಿನಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ | ಆರೋಪಿಯ ಬಂಧನ Read More »

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

ಮುಂಬೈ: ಕೆಲವು ಆ್ಯಪ್​ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನ ನಿರ್ಮಾಣ ಮಾಡಿ ಪ್ರಕಟಿಸುತ್ತಿದ್ದರೆಂಬ ಆರೋಪದ ಮೇಲೆ ಮುಂಬೈ ಕ್ರೈಮ್ ಬ್ರಾಂಚ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನ ಬಂಧಿಸಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರೇ ಪ್ರಮುಖ ಆರೋಪಿ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸೂಕ್ತ ಸಾಕ್ಷ್ಯವಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ರಾಜ್​ ಕುಂದ್ರಾ ಸೋಮವಾರ ವಿಚಾರಣೆಗಾಗಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್​ ಪ್ರಾಪರ್ಟಿ ಸೆಲ್​ಗೆ ಬಂದಿದ್ದರು

ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ Read More »