ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಸ್ಥಳಗಳನ್ನು ವೀಕ್ಷಿಸಲು ಬಂದ ವಿರೋಧಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ಭೇಟಿ ನೀಡಿ ಮುಂಜಾನೆ ಕಡಲ ಕಿನಾರೆಯಲ್ಲಿ ವಾಕಿಂಗ್ ಹೋಗಿದ್ದರೆ.
ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ಬಂದ ಸಿದ್ದರಾಮಯ್ಯನವರು ಕಾರವಾರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಇಂದು ಮುಂಜಾನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ವಾಕ್ ಮಾಡಿದರು.
ಇನ್ನೂ ಇಂದು ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಯಲ್ಲಾಪುರ ತಾಲೂಕಿನ ನೆರೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಕಾರವಾರ ತಾಲೂಕಿನ ಕದ್ರಾ ಜಲಾಶಯದಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.
ಕೆಪಿಸಿ ಹಾಗೂ ಕೈಗಾ ಅಧಿಕಾರಿಗಳ ಜೊತೆ ನೆರೆ ಸಂಬಂಧ ಸಭೆ ನಡೆಸಿ ಮಧ್ಯಾಹ್ನ ಅಂಕೋಲಾ ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.


























