Ad Widget .

ಬೊಮ್ಮಾಯಿ ಸಂಪುಟ| ಕೋಟ, ಅಂಗಾರ ಔಟ್ |ಸುನಿಲ್‌ ಕುಮಾರ್‌, ಭರತ್‌ ಶೆಟ್ಟಿ ಇನ್…!?

Ad Widget . Ad Widget .

ಮಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕರಾವಳಿ ಸಮಿತಿಯೂ ಸಚಿವ ಸ್ಥಾನಕ್ಕೆ ಲಾಭ ನಡೆಯುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್.ಅಂಗಾರಕ್ಕೆ ಕೋಕ್ ನೀಡುವುದು ಖಚಿತವಾಗಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸಂಪುಟ ಸೇರುವ ಸಾಧ್ಯತೆಯಿದೆ.

Ad Widget . Ad Widget .

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಚುನಾವಣೆಯ ದೃಷ್ಟಿಯಿಂದ ರಾಜ್ಯದ ನಾಯಕತ್ವ ಬದಲಾವಣೆಯನ್ನು ಮಾಡಲಾಗಿದೆ. ಹಿರಿಯ ಹಿರಿಯ ಸಚಿವರಿಗೆ ಈ ಬಾರಿ ಸಂಪುಟದಲ್ಲಿ ಕೋಕ್ ನೀಡುವ ಸಾಧ್ಯತೆಯಿದೆ. ಅದ್ರಲ್ಲೂ ಕರಾವಳಿ ಭಾಗದಿಂದ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆಯಿದೆ.

ಬಿಲ್ಲವ ಕೋಟಾದಡಿಯಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಕುರಿತು ರಾಜ್ಯ ನಾಯಕರಿಗೆ ಅಸಮಾಧಾನವಿದೆ. ಕರಾವಳಿಯ ಮುಂದಿನ ನಾಯಕತ್ವದ ಚುಕ್ಕಾಣಿ ಹಿಡಿಯಬಲ್ಲ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯೂ ಇದೆ. ಬಿಲ್ಲವ ಕೋಟ ಮತ್ತು ಉಡುಪಿ ಜಿಲ್ಲೆಯ ಸ್ಥಾನದಿಂದ ಸುನಿಲ್ ಕುಮಾರ್ ಸಚಿವರಾಗುವುದು ಖಚಿತ.

ಇನ್ನು ದಕ್ಷಿಣ ಕನ್ನಡ ಜಿಲ್ಲಾ ಕೋಟಾದಡಿಯಲ್ಲಿ ಎಸ್ .ಅಂಗಾರ ಸಚಿವರಾಗಿದ್ದಾರೆ. ಆದರೆ ಯುವಕರಿಗೆ ಆದ್ಯತೆ ನೀಡುವ ಸಲುವಾಗಿ ಈ ಬಾರಿಯ ಸಂಪುಟದಲ್ಲಿ ಭರತ್ ಶೆಟ್ಟಿ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯೂ ಇದೆ. ಬಂಟ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಭರತ್ ಶೆಟ್ಟಿ ಆಯ್ಕೆ ಸಾಧ್ಯತೆಯಿದೆ. ಒಂದೊಮ್ಮೆ ಅಂಗಾರಗೆ ಸಚಿವ ಸ್ಥಾನ ನೀಡಿದರೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಬಂಟ ಕೋಟಾದಡಿಯಲ್ಲಿ ಸಚಿವ ಸ್ಥಾನ ಲಭಿಸುವ ಸಾಧ್ಯತೆಯಿದೆ.

ಒಟ್ಟಿನಲ್ಲಿ ರಾಜ್ಯದ ಸಚಿವ ಸಂಪುಟ ಕಸರತ್ತು ಈ ಬಾರಿ ಕರಾವಳಿ ಪ್ರದೇಶದಲ್ಲಿ ತೀವ್ರ ಕುತೂಹಲವನ್ನು ಮೂಡಿಸಿದೆ. ಈ ಬಾರಿ ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕುವ ಸಾಧ್ಯತೆ ಇರುವ ಕಾರಣ ಸುನಿಲ್ ಕುಮಾರ್, ಭರತ್ ಶೆಟ್ಟಿ ಹಾಗೂ ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿಗರು ನಿರೀಕ್ಷೆಯಲ್ಲಿದ್ದಾರೆ.

Leave a Comment

Your email address will not be published. Required fields are marked *