Ad Widget .

ಕೊರೊನಾ ನೆಗೆಟಿವ್ ವರದಿ ಇಲ್ಲದೆ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು| 50 ಕ್ಕೂ ಹೆಚ್ಚು ಮಂದಿಗೆ ಕ್ವಾರಂಟೈನ್

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾದ ಘಟನೆ ಆಗಸ್ಟ್ 2 ರಂದು ನಡೆದಿದೆ.

Ad Widget . Ad Widget . Ad Widget .

ಕೇರಳ ಹಾಗೂ ಮಹಾರಾಷ್ಟ್ರದಿಂದ ರೈಲಿನಲ್ಲಿ ಬಂದ ಪ್ರಯಾಣಿಕರಲ್ಲಿ ಕೋವಿಡ್ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ ಸಂದರ್ಭ ನೆಗೆಟಿವ್ ವರದಿ ಹೊಂದಿರದ ಕೇರಳ ಮತ್ತು ಮಹಾರಾಷ್ಟ್ರದ 50 ಕ್ಕೂ ಹೆಚ್ಚು ಪ್ರಯಾಣಿಕರನ್ನುತಡೆಹಿಡಿದು ನಗರದ ಪುರಭವನದಲ್ಲಿ ಇರಿಸಿ ಎಲ್ಲರನ್ನೂ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಯಿತು.

ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ದೃಷ್ಟಿಯಿಂದ ಅವರ ಮನೆಗಳಿಗೆ ಹೋಗಲು ಅನುಮತಿ ನೀಡಲಾಯಿತು. ವರದಿಗಳು ಬರುವವರೆಗೂ ಅವರನ್ನು ಹೋಮ್ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.

ಆ ಬಳಿಕ ಪುರುಷ ಪ್ರಯಾಣಿಕರನ್ನು ಪುರಭವನದ ಇರಿಸಿಕೊಳ್ಳಲು ನಿರ್ಧರಿಸಿತು. ನೆಗೆಟಿವ್ ಬರುವ ಪ್ರಯಾಣಿಕರಿಗೆ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು.‌ ಪಾಸಿಟಿವ್ ಬಂದ ಪ್ರಯಾಣಿಕರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ. ರೈಲು ನಿಲ್ದಾಣಗಳಲ್ಲಿ ತಪಾಸಣೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *