ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು ಮುಳು ಗಡೆಗೊಂಡಿತ್ತು. ಇದರಿಂದಾಗಿ ಸುಬ್ರ ಹ್ಮಣ್ಯ- ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕುಕ್ಕೆಯ ಪರಿಸರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ.
ಸ್ನಾನಘಟ್ಟ ಜಲಾವೃತ್ತ: ಘಟ್ಟ ಪ್ರದೇಶದಲ್ಲಿ ಸುರಿದ ಮಳೆಯ ಪರಿಣಾಮ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ಸ್ನಾನಘಟ್ಟವು ಮುಂಜಾನೆ ಮುಳುಗಡೆಯಾಗಿತ್ತು. ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯ ನೀರಿನಿಂದ ಆವೃತ ಗೊಂಡಿತ್ತು.
ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಕೃಷಿ ಭೂಮಿಗೆ ನೆರೆ ನೀರು ಆವರಿಸಿದೆ. ಪುಷ್ಪಗಿರಿ ಅಂಚಿನ ಗ್ರಾಮಗಳಾದ ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು ಮುಂತಾದೆಡೆ ನದಿಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯಿಂದಾಗಿ ಅಡಿಕೆ ತೋಟಗಳು ಕೊಳೆರೋಗದ ಭೀತಿಗೆ ಒಳಗಾಗಿವೆ