ಪೋರ್ನೋಗ್ರಫಿ ಪ್ರಕರಣದಲ್ಲಿ ಬಂಧಿತನಾಗಿರುವ ಉದ್ಯಮಿ ರಾಜ್ ಕುಂದ್ರಾಗೆ ಇಂದು ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ರಾಜ್ ಕುಂದ್ರಾ ಹಾಗೂ ರಯಾನ್ ತಕ್ಷಣ ಬಿಡುಗಡೆ ಮಾಡಿ ಎಂದು ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಕುಂದ್ರಾ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾನೂನು ಬಾಹಿರವಾಗಿ ನನ್ನನ್ನು ಬಂಧಿಸಲಾಗಿದೆ ಎಂದು ರಾಜ್ ಕುಂದ್ರಾ ಆರೋಪಿಸಿದ್ದರು.
ಪ್ರಕರಣದ ವಿಚಾರಣೆ ವೇಳೆ, ಪಬ್ಲಿಕ್ ಪ್ರಾಸಿಕ್ಯೂಟರ್, ಪ್ರಕರಣದ ಸಾಕ್ಷ್ಯವನ್ನು ನಾಶಪಡಿಸುತ್ತಿದ್ದಾರೆ. ಮುಂದೆ ಮತ್ತಷ್ಟು ಸಾಕ್ಷಿ ನಾಶಪಡಿಸುವ ಸಾಧ್ಯತೆಯಿದೆ. ಹಾಗಾಗಿ ಜಾಮೀನು ನೀಡಬೇಡಿ ಎಂದು ವಾದಿಸಿದ್ದರು.
ತನಿಖಾ ಸಂಸ್ಥೆಗಳು, ಎಸ್‌ಎಎನ್ ನಿಂದ 51 ವಯಸ್ಕ ಚಲನಚಿತ್ರಗಳನ್ನು ಮತ್ತು ಅವರ ಲ್ಯಾಪ್‌ಟಾಪ್‌ನಿಂದ 68 ವಯಸ್ಕ ಚಲನಚಿತ್ರಗಳನ್ನು ವಶಕ್ಕೆ ಪಡೆದಿವೆ ಎಂದು ಪ್ರಾಸಿಕ್ಯೂಟರ್ ಹೇಳಿದ್ದಾರೆ.
ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮತ್ತು ಥಾರ್ಪೆ, ಬಂಧನ ಕಾನೂನುಬಾಹಿರ ಎಂದು ಅರ್ಜಿಯಲ್ಲಿ ಹೇಳಿದ್ದರು.
ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 41 ಎ ಅಡಿಯಲ್ಲಿ ಕಡ್ಡಾಯವಾಗಿ ನೋಟಿಸ್ ನೀಡುವ ನಿಯಮವನ್ನು ಪಾಲಿಸಲಾಗಿಲ್ಲ ಎಂದು ಅವರು ಹೇಳಿದ್ದರು. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಲಾಗಿದೆ.