ಬೆಂಗಳೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆ.,9 ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆ.9 ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಶಾಲೆ ಆರಂಭ ಯಾವಾಗ?
ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಜ್ಞರ ಜತೆ ಚರ್ಚಿಸಿ ಸಮಾಜ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ನಾಳೆಯೇ ಶಿಕ್ಷಣ ತಜ್ಞರ ಜತೆ ಸಭೆ ನಡೆಸಿ ಮುಖ್ಯಮಂತ್ರಿಗಳ ಸಲಹೆ ಪಡೆದು ನಿರ್ಣಯಕ್ಕೆ ಬರುವುದಾಗಿ ಹೇಳಿದರು.
ಟಾಸ್ಕ್ ಫೋರ್ಸ್ ಸಮಿತಿಯಿದ್ದು ಈಗಾಗಲೇ ಸಮಿತಿ ಶಾಲೆಗಳ ಆರಂಭ ಮಾಡಬೇಕು ಎಂದು ಹೇಳಿದ್ದು, ಪ್ರಾಥಮಿಕ ಶಾಲೆಯೂ ಆರಂಭಿಸಬೇಕು ಎಂದು ಅಭಿಪ್ರಾಯ ಮೂಡಿಬಂದಿದ್ದು ಸರ್ಕಾರ ಈ ವಿಚಾರವಾಗಿ ಗಮನಹರಿಸಿದ್ದು ತಜ್ಞರ ಜತೆ ಚರ್ಚಿಸಿ ಶಾಲೆ ಆರಂಭಿಸುವ ಕೆಲಸ ಮಾಡುತ್ತೇವೆ ಎಂದರು.