ನವದೆಹಲಿ: ಒಲಿಂಪಿಕ್ಸ್ ಗೆಲುವು ಸಾಧಿಸಲು ಯುವ ಸೈನಿಕರಿಗೆ ಸೂಕ್ತ ತರಬೇತಿ ನೀಡಿದರೆ ಚಿನ್ನದ ಪದಕಗಳು ಭಾರತಕ್ಕೆ ಲಭಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಸಿದಂತೆ ನೀರಜ್ ಚೋಪ್ರಾ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.
ಯುವ ಸೈನಿಕರಿಗೆ ಒಲಿಂಪಿಕ್ಸ್‌ಗೆ ತರಬೇತಿ ನೀಡಿದರೆ ಭಾರತಕ್ಕೆ 9ರಿಂದ 10 ಚಿನ್ನದ ಪದಕಗಳು ಬರುತ್ತವೆ ಎಂದು ನರೇಂದ್ರ ಮೋದಿ ಹೇಳಿದ್ದರು. 2013ರಲ್ಲಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಭಾಷಣ ಮಾಡಿದ್ದರು. ಇದೀಗ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅವರ ಭವಿಷ್ಯವಾಣಿಯನ್ನು ನಿಜವಾಗಿಸಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2013ರಲ್ಲಿ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಭಾಷಣ ಮಾಡಿದ್ದು, ನಾವು ಒಲಿಂಪಿಕ್ಸ್ ಹೆಚ್ಚು ಪದಕ ಗೆಲ್ಲಬೇಕಾದರೆ ನಮ್ಮ ಯುವ ಸೈನಿಕರಿಗೆ ಸರಿಯಾದ ತರಬೇತಿ ನೀಡಬೇಕು. ಸೈನಿಕರು ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದರೆ 8-10 ಚಿನ್ನದ ಪದಕಗಳನ್ನು ಗೆಲ್ಲುತ್ತಾರೆ ಎಂದು ಮೋದಿ ಹೇಳಿದ್ದರು. ಆ ಭವಿಷ್ಯವಾಣಿಯನ್ನು ಇದೀಗ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ನೀರಜ್ ಚೂಪ್ರಾ ನಿಜವಾಗಿಸಿದ್ದಾರೆ. ಅಲ್ಲದೆ ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.







