Ad Widget .

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ?

Ad Widget . Ad Widget .

ಮುಂಬೈ: ಅಪ್ರಾಪ್ತೆ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬಂದಿದೆ.
ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡ ಬೇಕು ಎಂದು ಆಸೆ ಹೊತ್ತಿದ್ದಳು. ಹಾಗಾಗಿ ಈ ವಿಚಾರವನ್ನು ಮಗಳ ಜೊತೆ ಚರ್ಚೆ ಮಾಡುತ್ತಿದ್ದಳು. ಆದರೆ ಮಗಳಿಗೆ ಇದು ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಹಾಗಾಗಿ ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

Ad Widget . Ad Widget .

ಜು.30ರಂದು ಪೊಲೀಸ್ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ಬಳಿಕ ಪೊಲೀಸರ ಸಮ್ಮುಖದಲ್ಲಿ ತಾಯಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳಿಸಲಾಗಿತ್ತು. ಮಹಿಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸತ್ತಿದ್ದಾರೆ ಎಂದು ಆಕೆಯ 15 ವರ್ಷದ ಮಗಳು ಹೇಳಿಕೆ ನೀಡಿದ್ದಳು. ಈ ದೂರಿನ ಆಧಾರದಲ್ಲಿ ಪೊಲೀಸರು ಕೂಡಾ ಅದನ್ನು ನಂಬಿ ಪ್ರಕರಣ ದಾಖಲಿಸಿದ್ದರು.
ಶವದ ಮರಣೋತ್ತರ ಪರೀಕ್ಷೆ ವೇಳೆ ಮಹಿಳೆ ಸಹಜವಾಗಿ ಸತ್ತಿಲ್ಲ. ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್ ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *