ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ರಾಜ್ಯಕ್ಕೆ ವಲಸಿಗರ ಪ್ರಮಾಣ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆ ನಂತರ ರಾಜಧಾನಿ ಬೆಂಗಳೂರು ಸೇರಿದಂತೆ ನೆರೆ ರಾಜ್ಯಗಳಿಗೆ ಗಡಿ ಹಂಚಿಕೊಂಡಿರುವ ಎಂಟು ಜಿಲ್ಲೆಗಳು ಹಾಗೂ ಕೋವಿಡ್-19 ಹೆಚ್ಚಾಗಿರುವ ಜಿಲ್ಲೆಗಳಲ್ಲೂ ಬಿಗಿಕ್ರಮ ಜಾರಿಯಾಗುವ ಸಂಭವವಿದೆ.
ಈ ಬಗ್ಗೆ ಈಗಾಗಲೇ ಸುಳಿವು ಕೊಟ್ಟಿರುವ ಕಂದಾಯ ಸಚಿವ ಆರ್.ಅಶೋಕ್ ಅವರು ಆ.15ರ ನಂತರ ಬೆಂಗಳೂರು ಮತ್ತಿತರ ಕಡೆ ಕೆಲವು ಕಠಿಣ ನಿಯಮಗಳನ್ನು ಜಾರಿ ಮಾಡುವುದು ಅನಿವಾರ್ಯ ಎಂದು ಹೇಳಿದ್ದಾರೆ.
ಹೀಗಾಗಿ ಬೆಂಗಳೂರಿನಲ್ಲಿ ರಾತ್ರಿ 7 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಹಾಗೂ ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಾಗುವ ಸಂಭವವಿದೆ.