Ad Widget .

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ – ಸಿ ಎಸ್ ರವಿ‌ ಆದೇಶ

Ad Widget . Ad Widget .

ಬೆಂಗಳೂರು : ಸರ್ಕಾರದ ಸಭೆ -‌ ಸಮಾರಂಭಗಳಲ್ಲಿ ಹೂಗುಚ್ಚ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿ ಇತ್ಯಾದಿಗಳನ್ನು ನೀಡುವುದನ್ನು ನಿಷೇಧಿಸಿ‌ ಆದೇಶಿಸಿದೆ.

Ad Widget . Ad Widget .

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು, ಈ ಮೂಲಕ ನಿರ್ದೇಶಿಸಿದೆ.


ಈ ನಿರ್ದೇಶನವನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳ ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *