ಜಾವೆಲಿನ್ ಥ್ರೋನಲ್ಲಿ ಬಂಗಾರದ ಸಾಧನೆ ಮಾಡಿದ ನೀರಜ್ ಚೋಪ್ರಾ ಅವರಿಗೆ ಕಾಶೀನಾಥ್ ನಾಯ್ಕ್ ಎಂಬ ಹೆಸರಿನ ಯಾವುದೇ ಕೋಚ್ ಅನ್ನು ನೇಮಕ ಮಾಡಿರಲಿಲ್ಲ. ಅವರು ಕೋಚ್ ಎಂಬ ಕಾರಣಕ್ಕೆ ಕರ್ನಾಟಕ ಸರ್ಕಾರ ಬಹುಮಾನ ಘೋಷಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ದೊರಕಿದರೆ ರಾಜ್ಯ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸುವುದಾಗಿ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ಹೇಳಿದ್ದಾರೆ.
ಅಥ್ಲೆಟಿಕ್ಸ್‌ನಲ್ಲಿ ದೇಶಕ್ಕೆ ಇತಿಹಾಸದಲ್ಲೇ ಮೊದಲ ಚಿನ್ನದ ಪದಕ ತಂದಿತ್ತ ನೀರಜ್ ಚೋಪ್ರಾಗೆ ಕನ್ನಡಿಗ ಕಾಶೀನಾಥ್ ನಾಯ್‌್ಕ ಕೋಚ್ ಆಗಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದು ಕನ್ನಡಿಗರ ಹೆಮ್ಮೆ ಹೆಚ್ಚಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ 10 ಲಕ್ಷ ರೂ ಬಹುಮಾನ ಘೋಷಿಸಿತ್ತು. ಇದರ ನಡುವೆಯೇ ಅದಿಲ್ಲೆ ಸುಮರಿವಾಲ್ಲಾ ಅವರ ಹೇಳಿಕೆ ಹೊಸ ವಿವಾದ ಸೃಷ್ಟಿಸಿದೆ.