Ad Widget .

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

Ad Widget . Ad Widget .

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲಕ್ಷಾಂತರ ಮೌಲ್ಯದ ಡೀಸೆಲ್ ಕಳವು ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಐವನ್ ಚಾರ್ಲೋ ಪಿಂಟೋ ಎಂದು ಗುರುತಿಸಲಾಗಿದೆ. ಕೆಲ ದಿಗಳ ಹಿಂದೆ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಲಕ್ಷಾಂತರ ಮೌಲ್ಯದ ಡೀಸೆಲ್ ಕಳ್ಳತನ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು.

Ad Widget . Ad Widget .

ಈ ಪ್ರಕರಣದ ಹಿಂದೆ ಜಾಡು ಹಿಡಿದು ಹೊರ ಪೋಲಿಸರು ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ಜೀಪ್, ಡಿಸೇಲ್ ಕೊಂಡು ಹೋಗಲು ಬಳಸಿದ ಕ್ಯಾನ್ ಗಳು ಮತ್ತು ಡಿಸೇಲ್ ನ್ನು ವಶಕ್ಕೆ ಪಡೆದುಕೊಂಡಿದ್ದು, ನಂತರ ಕೃತ್ಯದಲ್ಲಿ ಪೈಪ್ ಲೈನ್ ಗೆ ಹೋಲ್ ತೆಗೆದು ವೆಲ್ಡಿಂಗ್ ಮಾಡಿ ಪೈಪ್ ಲೈನ್ ಅಳವಡಿಸಿದ ವೆಲ್ಡರ್ ಗಳಾದ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್ ಪ್ರೀತಮ್ ಡಿ’ಸೋಜನನ್ನು ಕೂಡ ಬಂಧಿಸಿದ್ದಾರೆ.
ಪ್ರಕರಣದಲ್ಲಿ ಉಳಿದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂಧಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲೆ ಪೋಲೀಸ್ ಅಧೀಕ್ಷಕರ ನಿರ್ದೇಶನದಂತೆ ಪೋಲೀಸ್ ಉಪಾಧೀಕ್ಷಕರು, ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ಪೆÇಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್ ರವರ ನೇತೃತ್ವದ ತಂಡ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ, ಹೆಚ್.ಸಿಗಳಾದ ಜನಾರ್ಧನ, ಗೋಣಿಬಸಪ್ಪ, ಸುರೇಶ್ ಪಿ.ಸಿಗಳಾದ ಮನೋಜ್, ಪುನೀತ್ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *