ಮಂಗಳೂರು: ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ ಈತನನ್ನು ಈ ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದ್ದು, ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಎನ್ ಎಸ್ ಯು ಐ ಉಗ್ರವಾಗ ಹೋರಾಟ ನಡೆಸುವುದಾಗಿ ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ.
ಪ್ರಾಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಯ ಎಚ್ಚರಿಕೆ
