Ad Widget .

ನಾಗರ ಪಂಚಮಿ ನಾಡಿಗೆ ದೊಡ್ಡದು| ನಾಗ ಪಂಚಮಿ ಆಚರಣೆ- ಆಚಾರ- ವಿಚಾರ|

ವಿಶೇಷ ವರದಿ: ಮಳೆಗಾಲ ಕಳೆದು ಹಬ್ಬಗಳ ಆಚರಣೆಗೆ ನಾಂದಿ ಹಾಡುವ ನಾಗರ ಪಂಚಮಿಯನ್ನು ಪ್ರತಿ ವರ್ಷ ಆಷಾಢ ಅಮಾವಾಸ್ಯೆಯ 5ನೇ ದಿನದಂದು, ಅಂದರೆ ಶ್ರಾವಣ ಮಾಸದಲ್ಲಿ ಆಚರಿಸಲಾಗುತ್ತಿದೆ. ನಾಗಸರ್ಪಗಳ ಬಗ್ಗೆ ಹಿಂದೂ ಧರ್ಮದಲ್ಲಿ ಅಪಾರವಾದ ನಂಬಿಕೆ ಹಾಗೂ ಭಕ್ತಿ ಇದೆ.

Ad Widget . Ad Widget .

ಪುರಾಣಗಳ ಪ್ರಕಾರ, ಪಾತಾಳ ಲೋಕವು ಹಾವುಗಳ ವಾಸಸ್ಥಾನವಾಗಿದ್ದು, ನಾಗರ ಪಂಚಮಿಯಂದು ಬೆಳ್ಳಿಗ ನಾಗನಿಗೆ, ಕಲ್ಲಿನ ನಾಗನಿಗೆ ಅಥವಾ ಮರದ ನಾಗನಿಗೆ ಹಾಲನ್ನು ಅಭಿಷೇಕ ಮಾಡುವುದರಿಂದ ಪಾತಾಳ ಲೋಕದಲ್ಲಿನ ಹಾವುಗಳಿಗೆ ಅಭಿಷೇಕ ಮಾಡಿದಂತೆ ಎಂಬ ನಂಬಿಕೆಯಿದೆ. ಈ ಬಾರಿ ಆಗಸ್ಟ್ 13 ರಂದು ನಾಗರಪಂಚಮಿ ಹಬ್ಬ ನಡೆಯಲಿದೆ. ನಾಗರ ಪಂಚಮಿ ದಿನದಂದು ನಾಗಗಳನ್ನು ಪೂಜಿಸುವುದು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುವುದು. ನಾಗರ ಪಂಚಮಿ ದಿನದಂದು ನಾಗಗಳನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸುವುದು ಮಾತ್ರವಲ್ಲ, ಉಪವಾಸ ವ್ರತವನ್ನು ಕೂಡ ಕೈಗೊಳ್ಳಲಾಗುತ್ತದೆ.

Ad Widget . Ad Widget .

ದೇವಿ ಭಾಗವತ ಪುರಾಣದಲ್ಲಿ ನಾವು ಕೆಲವೊಂದು ಸರ್ಪಗಳ ಹೆಸರುಗಳನ್ನು ಕೇಳಬಹುದು. ನಾಗರ ಪಂಚಮಿ ಹಬ್ಬವನ್ನು ಕೇವಲ ಹಾವುಗಳನ್ನು ರಕ್ಷಿಸಲು ಮಾತ್ರವಲ್ಲ, ಪ್ರಾಣಿ ಸಂಕುಲವನ್ನು ಸೃಷ್ಟಿಯನ್ನು ರಕ್ಷಿಸುವುದರ ಕುರಿತು ಜ್ಞಾನವನ್ನು ಮೂಡಿಸುತ್ತದೆ.

ಪ್ರಾಚೀನ ಕಾಲದಿಂದಲೂ ನಾಗಗಳನ್ನು ಆರಾಧಿಸಿಕೊಂಡು ಬರಲಾಗಿದ್ದು, ನಾಗರ ಪಂಚಮಿಯಂದು ನಾಗರನ್ನು ಪೂಜಿಸಲಾಗುತ್ತದೆ ಮತ್ತು ಹಸುವಿನ ಹಾಲಿನಿಂದ ನಾಗರ ಕಲ್ಲುಗಳಿಗೆ ಅಭಿಷೇಕವನ್ನು ಮಾಡಲಾಗುತ್ತದೆ.

ಪೌರಾಣಿಕ ಗ್ರಂಥಗಳ ಪ್ರಕಾರ ನಾಗಗಳು ಮನುಷ್ಯನ ಜೀವನದಲ್ಲಿ ಸಾಕಷ್ಟು ಪ್ರಭಾವ ಬೀರುತ್ತದೆ ಎಂದು ತಿಳಿಸಲಾಗಿದೆ. ನಾಗದೋಷ ಇದ್ದವರು ಸಾಮಾನ್ಯವಾಗಿ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಅನುಭವಿಸುತ್ತಾರೆ. ಆ ಕಾರಣದಿಂದಾಗಿಯೇ ನಾಗ ದೇವತೆಗಳು ನೆಲೆಸಿರುವ ಪುಣ್ಯಕ್ಷೇತ್ರಕ್ಕೆ ತೆರಳಿ ಪೂಜೆ ಹಾಗೂ ಶಾಂತಿಗಳನ್ನು ಮಾಡುತ್ತಾರೆ.

ನಾಗರ ಪಂಚಮಿಯ ಮಹತ್ವ ಏನು?

ಹಿಂದೂ ಧರ್ಮವು ಸತ್ಯವನ್ನು ಹುಡುಕುವುದರ ಸುತ್ತ ನೆಲೆಗೊಂಡಿರುವ ಒಂದು ನಂಬಿಕೆಯಾಗಿದೆ. ಹಿಂದೂಗಳಿಗೆ ಇದು ಜೀವನವನ್ನು ಮತ್ತು ಪ್ರಕೃತಿಯ ಶಕ್ತಿಗಳನ್ನು ಪೂಜಿಸುವ ಒಂದು ಮಾರ್ಗವಾಗಿ ಪ್ರಾಚೀನ ಕಾಲದಿಂದಲು ನಡೆದು ಬಂದಿದೆ. ನಾಗರ ಪಂಚಮಿಯನ್ನು ಶ್ರಾವಣ ಮಾಸದ ಶುಕ್ಲಪಕ್ಷದಲ್ಲಿ ಬರುವ ಐದನೆ ದಿನ ಅಂದರೆ ಪಂಚಮಿಯಂದು ಆಚರಿಸಲಾಗುತ್ತದೆ. ಇದು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಬರುತ್ತದೆ.

ಈ ಹಬ್ಬವನ್ನು ಇದೇ ತಿಂಗಳುಗಳಲ್ಲಿ ಆಚರಿಸಲು ಹಿಂದಿರುವ ಪ್ರಧಾನ ಕಾರಣವೆಂದರೆ, ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.

ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ

ನಂಬಿಕೆಗಳ ಪ್ರಕಾರ ಶ್ರೀ ಕೃಷ್ಣನು ಕಾಳಿಯ ಎಂಬ ಹಾವಿನ ಉಪಟಳದಿಂದ ಜನರನ್ನು ರಕ್ಷಿಸಿದನು. ಆ ಕತೆ ಹೀಗಿದೆ;- ಒಂದು ದಿನ ಬಾಲಕ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ಚೆಂಡು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.

ಆಗ ಕಾಳಿಯ ಎಂಬ ಹಾವು ಅವನ ಮೇಲೆ ಆಕ್ರಮಣ ಮಾಡಿತು. ಆಗ ಕೃಷ್ಣನು ಆ ಹಾವಿನ ವಿರುದ್ಧ ಹೋರಾಟ ಮಾಡಿದನು. ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಯಿತು. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚಿತು. ಈ ಮಾತಿಗೆ ಒಪ್ಪಿದ ಕೃಷ್ಣನು ಜನರಿಗೆ ತೊಂದರೆ ಮಾಡಬೇಡ ಎಂದು ಬುದ್ಧಿವಾದ ಹೇಳಿ ಆ ಹಾವನ್ನು ಬಿಟ್ಟು ಬಿಟ್ಟನು. ಹೀಗೆ ನಾಗರ ಪಂಚಮಿಯನ್ನು ಕೃಷ್ಣನು ಕಾಳಿಯಾ ಎಂಬ ಭಯಾನಕ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

Leave a Comment

Your email address will not be published. Required fields are marked *