Ad Widget .

ಚಾರ್ಮಾಡಿ ಘಾಟಿ: 24 ಗಂಟೆ ಲಘು ವಾಹನ ಸಂಚಾರಕ್ಕೆ ಅನುಮತಿ

Ad Widget . Ad Widget .

ಚಾರ್ಮಾಡಿ: ಮಳೆ ಹೆಚ್ಚುತ್ತಿರುವ ಕಾರಣದಿಂದ ಗುಡ್ಡ ಕುಸಿತದ ಭೀತಿ ಎದುರಾಗುತ್ತಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದೆ.

Ad Widget . Ad Widget .

ರಾತ್ರಿ ಸಮಯದಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಿಮಗಳೂರು ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದಾಗಿ ದಿನದ 24 ಗಂಟೆ ಚಾರ್ಮಾಡಿ ಮೂಲಕ ಟೆಂಪೋ ಟ್ರಾವೆಲ್ಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್ ಹಾಗೂ ದ್ವಿಚಕ್ರ ವಾಹನಗಳು ಸಂಚಾರ ನಡೆಸಬಹುದಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಕೆಎಸ್ಆರ್ ಟಿಸಿ ಬಸ್, 6 ಚಕ್ರದ ಲಾರಿಗಳ ಸಂಚಾರಕ್ಕೆ ಬೆಳಿಗ್ಗೆ ಆರರಿಂದ ಸಂಜೆ ಏಳರವರೆಗೆ ಮಾತ್ರ ಸದ್ಯ ಅವಕಾಶವಿದೆ. ರಾತ್ರಿ ವೇಳೆಯಲ್ಲಿ ಇವುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇನ್ನು ಘನ ವಾಹನಗಳ ಸಂಚಾರವನ್ನು ಸದ್ಯ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *