Ad Widget .

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ

ಪುತ್ತೂರು: ಇಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ‌ ತೆರೆದಿದ್ದು, ಅದರಲ್ಲಿ ಗೋಮಾಂಸ ಶೇಖರಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಆ.12ರಂದು ಪುತ್ತೂರು ನಗರದ ಸಾಲ್ಮರದ‌‌ ಸಮೀಪ ಈ ಘಟನೆ ‌ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Ad Widget . Ad Widget .

ಸಾಲ್ಮರದಲ್ಲಿರುವ ಮೌಂಟೇನ್ ವ್ಯೂ ಶಾಲೆಗೆ ಸಮೀಪದಲ್ಲೇ ಇರುವ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದು, ಅದರಲ್ಲಿ ಗೋಮಾಂಸವನ್ನು ಶೇಖರಿಸಿಡಲಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪುತ್ತೂರಿನ ಪೋಲಿಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಗೋಮಾಂಸವಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

ದಾಳಿಯ ಸಂದರ್ಭದಲ್ಲಿ ಸ್ಥಳೀಯ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು .ಸದ್ಯ ಪರಿಸ್ಥಿತಿ ಶಾಂತವಾಗಿದ್ದರೂ ಮುನ್ನೆಚ್ಚರಿಕೆಯ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *