Ad Widget

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು|

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಆ.23ರಿಂದ 9ನೇ ತರಗತಿಯಿಂದ 12ರವರೆಗೆ ಪ್ರಾರಂಭವಾಗಲಿವೆ.

Ad Widget . Ad Widget . Ad Widget . Ad Widget . Ad Widget . Ad Widget

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Ad Widget . Ad Widget .

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು.ಒಂದು ವಾರ ಶಾಲೆಯನ್ನು ಮುಚ್ಚುವ ಜೊತೆಗೆ ಸ್ಯಾನಿಟೈಸ್ ಮಾಡಿ ವಾರದ ನಂತರ ಶಾಲೆ ಆರಂಭಿಸಲಾಗುವುದು. ಜಿಲ್ಲಾವಾರು ಪಾಸಿಟಿವಿಟಿ ದರ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *