Ad Widget .

ಬಂಟ್ವಾಳ: ಮನೆಯೊಳಗೆ ಕೂಡಿ ಹಾಕಿ ಮಹಿಳೆಯ ಅತ್ಯಾಚಾರ

Ad Widget . Ad Widget .

ಬಂಟ್ವಾಳ: ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮನೆಗೆ ನುಗ್ಗಿ ಬಲಾತ್ಕಾರವಾಗಿ ಅತ್ಯಾಚಾರ ವೆಸಗಿದಲ್ಲದೆ, ಹಲ್ಲೆ ಮಾಡಿ ಇದೀಗಾ ಆರೋಪಿ ತಲೆಮರೆಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ನಡೆದಿದ್ದು, ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ.

Ad Widget . Ad Widget .

ಸಿದ್ದಕಟ್ಟೆ ಅನಿಲ್ ಎಂಬಾತ ಪ್ರಕರಣದ ಆರೋಪಿಯಾಗಿದ್ದು. ಆಗಸ್ಟ್ 11 ರಂದು 52 ಹರೆಯದ ಮಹಿಳೆ ಕೂಲಿ ಕೆಲಸ ಮಾಡಿ ಮನೆಗೆ ಬಂದು ಬಚ್ಚಲಿನಲ್ಲಿ ಬಿಸಿ ನೀರು ಕಾಯಿಸಲು ಎಂದು ಹೋಗಿದ್ದರು. ಇದೇ ಸಮಯ ನೋಡಿಕೊಂಡು ಬಂದ ಆರೋಪಿ ಅನಿಲ್ ಮಹಿಳೆಯನ್ನು ಬಲಾತ್ಕಾರವಾಗಿ ಮನೆಯೊಳಗೆ ಎಳೆದುಕೊಂಡು ಹೋಗಿದ್ದಾನೆ. ಬಳಿಕ ಮನೆಯೊಳಗೆ ಕೂಡಿ ಹಾಕಿ ಅತ್ಯಾಚಾರ ಮಾಡಲು ನೋಡಿದ್ದಾನೆ. ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದ ಸಂದರ್ಭದಲ್ಲಿ ಹಲ್ಲೆ ನಡೆಸಿ ಬಳಿಕ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಅತ್ಯಾಚಾರ ಕ್ಕೊಳಗಾದ ಮಹಿಳೆ ಮಗಳಿಗೆ ಹಾಗೂ ಅಳಿಯನಿಗೆ ಪೋನ್ ಕರೆ ಮಾಡಿ ತಿಳಿಸಿ ಅವರ ಜೊತೆ ಗ್ರಾಮಾಂತರ ಪೋಲೀಸ್ ಸ್ಟೇಷನ್ ಆಗಮಿಸಿ ದೂರು ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಇನ್ನು ಮಹಿಳೆಗೆ ಹಲ್ಲೆ ನಡೆಸಿ, ಅತ್ಯಾಚಾರ ಮಾಡಿ ಬಳಿಕ ಯಾರ ಬಳಿಯಲ್ಲಿ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿಯಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರು ಗಂಡನನ್ನು ಕಳೆದುಕೊಂಡು ಬಳಿಕ ಮಗಳೊಂದಿಗೆ ವಾಸವಾಗಿದ್ದರು ಆದರೆ ಕೆಲ ವರ್ಷಗಳ ಹಿಂದೆ ಮಗಳಿಗೆ ಮದುವೆಯಾಗಿದ್ದು ಒಬ್ಬಂಟಿಯಾಗಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.

ಬಂಟ್ವಾಳ ಪೋಲೀಸರು ಅತ್ಯಾಚಾರ ಎಸಗಿ ಪರಾರಿಯಾಗಿರುವ ಆರೋಪಿಗೆ ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *