Ad Widget

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು|

ನವದೆಹಲಿ : ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ತ್ರಿವರ್ಣ ರಂಗು ಕಂಗೊಳಿಸುತ್ತಿದೆ. ದೇಶದ ಶಕ್ತಿಕೇಂದ್ರ ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ 8ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸ್ಮಾರಕ ರೆಡ್ ಫೋರ್ಟ್ನಲ್ಲಿ 8 ಬಾರಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ ಎಂಬ ದಾಖಲೆ ಬರೆದಿದ್ದಾರೆ.

Ad Widget . Ad Widget .

ಧ್ವಜಾರೋಹಣಕ್ಕೂಮುನ್ನ ರಾಜ್ ಘಾಟ್ ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಸಲಾಯಿತು.

Leave a Comment

Your email address will not be published. Required fields are marked *