Ad Widget .

‘ಬಸವನಾಡಲ್ಲಿ ಭ್ರಷ್ಟರಿಗಿಲ್ಲ ಅವಕಾಶ’ – ಸಚಿವೆ ಶಶಿಕಲಾ ಜೊಲ್ಲೆಗೆ ಘೇರಾವ್ ಕೂಗಿದ ವಿಜಯಪುರ ಜನತೆ

Ad Widget . Ad Widget .

ವಿಜಯಪುರ: ಧ್ವಜಾರೋಹಣ ಮಾಡದಂತೆ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಯೂ ಆಗಿರುವ ಶಶಿಕಲಾ ಜೊಲ್ಲೆ ಅವರಿಗೆ ಮಹಿಳೆಯರು ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ.

Ad Widget . Ad Widget .

ಇಂದು 75 ನೇ ಸ್ವಾತಂತ್ರೋತ್ಸವ ಹಿನ್ನೆಲೆ ನಗರದ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣಕ್ಕ ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯನ್ನು ತಡೆದ ಮಹಿಳೆಯರು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡದಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸಚಿವೆ ಬರುತ್ತಿದ್ದಂತೆ ಭ್ರಷ್ಟರಿಗೆ ಬಸವ ನಾಡಿನಲ್ಲಿ ಅವಕಾಶ ಇಲ್ಲ ಎಂದು ಧಿಕ್ಕಾರ ಕೂಗಿದ 50ಕ್ಕೂ ಹೆಚ್ಚು ಮಹಿಳೆಯರು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆಗೆ ನಡೆಸಲು ಮುಂದಾದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಪೊಲೀಸರು, ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರನ್ನು ವಶಕ್ಕೆ ಪಡೆದು ಸಚಿವರು ಧ್ವಜಾರೋಹಣ ಮಾಡಲು ಅವಕಾಶ ಮಾಡಿಕೊಟ್ಟರು.

Leave a Comment

Your email address will not be published. Required fields are marked *