Ad Widget .

ಕಬಕ: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿ‌ಪಿಐ ಕಾರ್ಯಕರ್ತರು| ಸಾವರ್ಕರ್- ಟಿಪ್ಪು ಹೆಸರಿನಲ್ಲಿ ತಗಾದೆ…!

ಪುತ್ತೂರು : ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೊದ ಬದಲು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಆಗ್ರಹಿಸಿ ಎಸ್ ಡಿಪಿಐ ಸಂಘಟನೆಯ ಕಾರ್ಯಕರ್ತರ ತಂಡ ರಥಕ್ಕೆ ತಡೆಒಡ್ಡಿದ ಘಟನೆ ಆ.15ರಂದು ಪುತ್ತೂರಿನ ಹೊರವಲಯ ಕಬಕದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಳಿಕ ಪುತ್ತೂರು ನಗರ ಠಾಣೆ ಪೊಲೀಸರ ಸಕಾಲಿಕ ಕ್ರಮದಿಂದ ಸಂಭಾವ್ಯ ಸಂಘರ್ಷ ತಪ್ಪಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವದ ದಿನ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ತಡೆ ಒಡ್ಡಿದ್ದಾರೆ. ಗ್ರಾಮ ಪಂಚಾಯತ್ ನ ಈ ಸ್ವಾತಂತ್ರ್ಯ ರಥಕ್ಕೆ ಇಂದು ಬೆಳಿಗ್ಗೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ವಿನಯ್‌ ಕುಮಾರ್‌ ಕಲ್ಲೇಗ ಚಾಲನೆ ನೀಡಿದ್ದರು. ಬಳಿಕ ನೆರೆದಿದ್ದ ಜನರು ಜೈಕಾರ ಹಾಕಿದರು.

Ad Widget . Ad Widget . Ad Widget .

ಈ ಸಂದರ್ಭ ಇದ್ದಕ್ಕಿದಂತೆ ಆಗಮಿಸಿದ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ರವರು ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದ್ದಾರೆ. ಆದರೇ ಎಸ್.ಡಿ.ಪಿ.ಐ. ಕಾರ್ಯಕರ್ತರು ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿದಿದ್ದಾರೆ.

ಘಟನೆಯ ಮಾಹಿತಿ ಪಡೆದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.

ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್​ ಫೋಟೋ ಹಾಕಿದ್ದು ಎಸ್‌ಡಿಪಿಐ ಕಾರ್ಯಕರ್ತರನ್ನು ಕೆರಳಿಸಿದ್ದು, ಅದೇ ಕಾರಣಕ್ಕಾಗಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ರಥಕ್ಕೆ ತಡೆಯೊಡ್ಡಿ ಸಾವರ್ಕರ್ ಬದಲು ಟಿಪ್ಪು ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ. ಆದರೆ, ಫೋಟೋ ವಿಚಾರಕ್ಕೆ ಶುರುವಾದ ಜಗಳ ದೊಡ್ಡದಾಗುತ್ತಾ ಹೋಗಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಲ್ಲದೇ, ಈ ವೇಳೆ ರಥಕ್ಕೆ ಅಡ್ಡಪಡಿಸಿದವರ ಮೇಲೆ ಕಾರು ಹತ್ತಿಸುವ ಯತ್ನವೂ ನಡೆದು ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು SDPI ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಕಬಕ ಗ್ರಾಮಪಂಚಾಯತ್ ಆವರಣದಲ್ಲಿ ಘಟನೆ ನಡೆದಿದ್ದು, ಗ್ರಾಮಪಂಚಾಯತ್ ಸದಸ್ಯರು, ಉಪಾಧ್ಯಕ್ಷರ ಜೊತೆ ಎಸ್​ಡಿಪಿಐ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಇಂಥದ್ದೊಂದು ಕಹಿ ಘಟನೆ ನಡೆದಿರುವುದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಈ ರೀತಿಯ ಜಗಳ ಆಗಬಾರದಿತ್ತು ಎಂದಿದ್ದಾರೆ.

Leave a Comment

Your email address will not be published. Required fields are marked *