ಸಿಲಿಂಡರ್ ಸ್ಫೋಟ: ಓರ್ವ ಸಾವು, ಚಿಂತಾಜನಕ ಸ್ಥಿಯಲ್ಲಿ ಒಂದು ವರ್ಷದ ಮಗು

Ad Widget ... ..

ಹುಬ್ಬಳ್ಳಿ: ಇಲ್ಲಿನ ಕಲಘಟಗಿ ಎಂಬಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

Ad Widget

ಕಲಘಟಗಿ ತಾಲೂಕಿನ ತಬಕದ ಹೊನ್ನಳ್ಳಿ ಗ್ರಾಮದ ತಮ್ಮಣ್ಣವರ ಮನೆಯಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಯಿಂದ ಯಲ್ಲಪ್ಪ(35) ಎಂಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವಂತಾಗಿದೆ. ಇದೀಗ ಗಾಯಾಳು ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದ ತ್ರೀವತ್ರೆಗೆ ಮನೆಯ ಮೇಲ್ಛಾವಣಿ ಸಹ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಉಳಿದವರು ಬಚಾವ್ ಆಗಿದ್ದಾರೆ. ಘಟನೆಯ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *