Ad Widget .

ಮಂಗಳೂರು: ಕೆ.ಜಿ ಗಟ್ಟಲೆ ಅಪಾಯಕಾರಿ ಸ್ಫೋಟಕ ಪತ್ತೆ : ಓರ್ವ ಬಂಧನ

Ad Widget . Ad Widget .

ಮಂಗಳೂರು: ಅಕ್ರಮವಾಗಿ 1725 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕಳನ್ನು ನಗರದ ಬಂದರ್‍ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ದಾಸ್ತಾನು ಇರಿಸಿರುವ ವಿಷಯ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಸಿದಂತೆ ಓರ್ವನ್ನು ಮಂಗಳೂರು ಪೆÇಲೀಸರು ಬಂಧಿಸಿದ್ದಾರೆ.

Ad Widget . Ad Widget .

ಬಂಟ್ವಾಳ ತಾಲೂಕು ಮುಡಿಪು ಕೈರಂಗಳ ನಿವಾಸಿ ಆನಂದ ಗಟ್ಟಿ (50) ಬಂಧಿತ ಆರೋಪಿ. ಈತನಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೆÇಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬ್ಯಾರಿಯಂ ನೈಟ್ರೇಟ್, 395 ಕೆ.ಜಿ. ಪೆÇಟ್ಯಾಷಿಯಂ ಕ್ಲೊರೈಟ್, 260 ಕೆ.ಜಿ. ತೂಕದ ವಿವಿಧ ಬಗೆಯ ಅಲ್ಯುಮಿನಿಯಂ ಪೌಡರ್, 30 ಕೆ.ಜಿ. ಲೀಡ್ ಬಾಲ್ಸ್, 240 ಕೆ.ಜಿ. ಚಾರ್ಕೊಲ್, 100 ಏರ್ ರೈಲ್‍ಗಳನ್ನು ಒಳಗೊಂಡ 140 ಪಿಲೆಟ್ಸ್ ಪ್ಯಾಕೇಟ್, 100 ಏರ್ ರೈಲ್‍ಗಳನ್ನು ಒಳಗೊಂಡ 21 ಪಿಲೆಟ್ಸ್ ಪ್ಯಾಕೇಟ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 1500 ಕೆ.ಜಿ. ತೂಕದ ಸ್ಫೋಟಕವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 1.11 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ನಗರದ ಬಂದರು ಪೆÇಲೀಸ್ ಠಾಣಾ ವ್ಯಾಪ್ತಿಯ ಕಟ್ಟಡವೊಂದರ ಕೊಠಡಿಯಲ್ಲಿ ಅಕ್ರಮವಾಗಿ ನಿಷೇಧಿತ ಸ್ಫೋಟಕಗಳನ್ನು ದಾಸ್ತಾನು ಇಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೆÇಲೀಸ್ ಆಯುಕ್ತ ಹರಿರಾಂ ಶಂಕರ್ ಪರಿಶೀಲನೆ ನಡೆಸಿದ್ದರು.
ಈ ಸಂದರ್ಭ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳಿರುವ ಕಟ್ಟಡವೊಂದರ ಕೊಠಡಿಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ದಾಸ್ತಾನಿಡಲಾಗಿತ್ತು. ಮಕ್ಕಳು, ಸಾಕುಪ್ರಾಣಿಗಳನ್ನು ಓಡಾಟ ನಡೆಸುವ ಪ್ರದೇಶ ಇದಾಗಿತ್ತು. ಈ ಸಂದರ್ಭ ಕೆಲವೊಂದು ವಸ್ತುಗಳು ಸಿಕ್ಕಿದ್ದು, ಅದನ್ನು ಪರಿಶೀಲನೆ ನಡೆಸಿದಾಗ ಅಕ್ರಮ ಸ್ಫೋಟಕ ಎಂಬುವುದು ಸಾಬೀತಾಗಿದೆ.

ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿದಾಗ ಇದರ ವಾರಸುದಾರರು ನಗರದ ಬಂದರು ಪ್ರದೇಶದಲ್ಲಿ ಗನ್ ಶಾಪ್ ನಡೆಸುತ್ತಿದ್ದ ಆನಂದ್ ಗಟ್ಟಿ ಎಂಬಾತ ಎಂದು ತಿಳಿದುಬಂದಿದೆ. ಆತನ ಗನ್ ಶಾಪ್ ಪರವಾನಿಗೆಗೂ ಪತ್ತೆಯಾದ ಸ್ಫೋಟಕಕ್ಕೂ ಯಾವುದೇ ಸಂಬಂಧವಿಲ್ಲ. ಕೋರೆ, ಪಟಾಕಿ, ಬಾವಿಯ ಕಲ್ಲು ಸ್ಫೋಟಿಸಲು, ಮೀನು ಹಿಡಿಯಲು ಈ ಸ್ಫೋಟಕಗಳನ್ನು ಬಳಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಆನಂದ್ ಗಟ್ಟಿಯನ್ನು ಬಂಧಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 10 ದಿನಗಳ ಕಾಲ ಪೆÇಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Leave a Comment

Your email address will not be published. Required fields are marked *