Ad Widget .

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ

Ad Widget . Ad Widget .

ಮಂಡ್ಯ ತಾಲೂಕಿನ ಸಾತನೂರು ಬಳಿ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗದ್ದೆಯಲ್ಲಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ.

Ad Widget . Ad Widget .

ಕೃಷಿ ಸಚಿವರಾಗಿ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಅವರು ಜನಾಶೀರ್ವಾದಕ್ಕೆ ಚಾಲನೆ ನೀಡಿ ನಂತರ ಸಾತನೂರಿನ ಕೃಷಿ ಜಮೀನೊಂದರಲ್ಲಿ ರೈತ ಮಹಿಳೆಯರೊಂದಿಗೆ ಗದ್ದೆಗಿಳಿದ ಸಚಿವೆ ಭತ್ತದ ಪೈರು ಹಿಡಿದು ನಾಟಿ ಮಾಡಿದರು. ಕೃಷಿಕ ಮಹಿಳೆಯರಂತೆ ನಾಟಿ ಮಾಡಿದ್ದು ವಿಶೇಷವಾಗಿತ್ತು.

ನಂತರ ಆಲೆಮನೆಗೆ ಭೇಟಿ ನೀಡಿ ಬೆಲ್ಲ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.

ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಕಲಬುರಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಭಗವಂತ ಖೂಬಾ ಯಾತ್ರೆ ಕೈಗೊಳ್ಳುತ್ತಿದ್ದಾರೆ.

Leave a Comment

Your email address will not be published. Required fields are marked *