ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| ತಾಲಿಬಾನ್ ಗೆ ಆಘಾತ|

Ad Widget ... ..

ಕಾಬೂಲ್: ತಾಲಿಬಾನ್ ಉಗ್ರರ ಹಿಡಿತಕ್ಕೆ ಸಿಲುಕಿದ ಆಫ್ಘಾನಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ನಿನ್ನೆ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ ಫೈಜಾಬಾದ್ ಆಗ್ನೇಯ ಪ್ರದೇಶದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.

Ad Widget

ಫೈಜಾಬಾದ್ ಆಗ್ನೇಯಕ್ಕೆ 83 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಆಗಸ್ಟ್ 15 ರಂದು ಆಫ್ಘಾನಿಸ್ತಾನ ಮತ್ತು ಕಜಕಿಸ್ತಾನ ಭಾಗದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ತಾಲಿಬಾನ್ ಉಗ್ರರ ಅಟ್ಟಹಾಸದಿಂದ ನಲುಗಿಹೋಗಿರುವ ಆಫ್ಘಾನಿಸ್ತಾನದಲ್ಲಿ ಪದೇ ಪದೇ ಭೂಕಂಪನ ಉಂಟಾಗುತ್ತಿರುವುದು ಆತಂಕ ಹೆಚ್ಚಿಸಿದೆ.

Leave a Comment

Your email address will not be published. Required fields are marked *